ಹುಬ್ಬಳ್ಳಿ: ಪ್ರಸಕ್ತವಾಗಿ ನಡೆಯುತ್ತಿರುವ ಅಧಿವೇಶನದಲ್ಲಿ 3 ನೇ ಸಾಲಿನಲ್ಲಿ ಕುಳಿತಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಚಿವರಲ್ಲದವರು 3 ಅಥವಾ 4 ನೇ ಸಾಲಿನಲ್ಲಿ ಕೂರುವುದು ಸಹಜ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನೀಗ ಸಚಿವ ಅಲ್ಲ. ಕೇವಲ ಶಾಸಕ, ಸಚಿವನಾಗಿದ್ದರೆ ಮೊದಲ ಅಥವಾ 2 ನೇ ಸಾಲಿನ ಕುರ್ಚಿಯಲ್ಲಿ ಕೂರುತ್ತಿದ್ದೇನು. ನಮ್ಮೊಂದಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೂ ಸಹ 4 ನೇ ಸಾಲಿನಲ್ಲಿ ಕುಳಿತಿದ್ದಾರೆ. ಇದು ಸಹಜ ಪ್ರಕ್ರಿಯೆ. ಇದಕ್ಕೆ ವಿಶೇಷತೆ ನೀಡುವ ಅಗತ್ಯವಿಲ್ಲ ಎಂದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆ
Advertisement
Advertisement
ಸಿದ್ದರಾಮಯ್ಯ ಅವರು ಸಹ ಮುಖ್ಯಮಂತ್ರಿ ಆಗಿದ್ದರು ಆದರೆ, ಕಳೆದ ಬಾರಿಯ ಸಮ್ಮಿಶ್ರ ಸರ್ಕಾರದಲ್ಲಿ ಅವರು ಸಹ ಅಧಿವೇಶನದಲ್ಲಿ 3 ಮತ್ತು 4 ನೇ ಸ್ಥಾನದಲ್ಲಿ ಕೂರುತ್ತಿದ್ದರು ಎಂದು ಹೇಳಿದರು. ಪಕ್ಷದ ಸಂಘಟನೆಗಾಗಿ ಪ್ರತಿ ಮೂರು, ನಾಲ್ಕು ತಿಂಗಳಿಗೊಮ್ಮೆ ಬಿಜೆಪಿ ಕಾರ್ಯಕಾರಿಣಿ ನಡೆಸಲಾಗುತ್ತಿದೆ. ಅದೇ ರೀತಿ ದಾವಣಗೆರೆಯಲ್ಲಿ 2 ದಿನಗಳ ಕಾರ್ಯಕಾರಿಣಿ ನಡೆಯುತ್ತಿದೆ. ಶನಿವಾರ ಸಂಜೆ ಕೋರ್ ಕಮಿಟಿ ಸಭೆ ನಡೆಯಲಿದ್ದು, ಭಾನುವಾರ ಕಾರ್ಯಕಾರಿಣಿ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡ BB ಸ್ಪರ್ಧಿ
Advertisement
Advertisement
ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ರಾಜ್ಯಾದ್ಯಂತ ಯಾರು ಪ್ರವಾಸ ಕೈಗೊಳ್ಳಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಕುರಿತು ದಾವಣಗೆರೆಯ ಕಾರ್ಯಕಾರಿಣಿಯಲ್ಲಿ ತೀರ್ಮಾನವಾಗುವ ಸಾಧ್ಯತೆ ಇದೆ ಎಂದು ಹೇಳಿದರು.