ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ (Hubballi-Dharawada) ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ (Jagadish Shetter) ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ತಾರೆ ಎಂದು ಅಭಿಮಾನಿಯೊಬ್ಬರು ರಕ್ತದಲ್ಲಿ ಪತ್ರ ಬರೆಯುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.
ಹುಬ್ಬಳ್ಳಿ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಎನ್. ಯಂಟ್ರುವಿ ಎಂಬಾತ ರಕ್ತದಲ್ಲಿ ಪತ್ರವನ್ನು ಬರೆದು ಶೆಟ್ಟರ್ ಮೇಲಿನ ತನ್ನ ಅಭಿಮಾನವನ್ನು ಮೆರೆದಿದ್ದಾನೆ. ಇದನ್ನೂ ಓದಿ: ಅಮಿತ್ ಶಾ, ವಿ.ಸೋಮಣ್ಣ ವಿರುದ್ಧ ಪೊಲೀಸರಿಗೆ ‘ಕೈ’ ನಾಯಕರ ದೂರು
- Advertisement
ಪತ್ರದಲ್ಲೇನಿದೆ?
ಮಾನ್ಯ ಜಗದೀಶ್ ಶೆಟ್ಟರ್ 100ಕ್ಕೆ ನೂರರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತದೆ. ಜೈ ಕಾಂಗ್ರೆಸ್.. ಎಂದು ಶೆಟ್ಟರ್ ಅಭಿಮಾನಿ ರಕ್ತದಲ್ಲಿ ಬರೆದಿದ್ದಾರೆ.
- Advertisement
ಬಿಜೆಪಿ ತೊರೆದು ಕಾಂಗ್ರೆಸ್‌ನಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣೆ ಎದುರಿಸುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲುತ್ತಾರೆ ಎಂಬುದನ್ನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದರು. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಮಾರುತಿ ಕಾರು ಚಕ್ರ ಹಾಕಿದ್ರೆ ಸರಿಯಾಗಿ ಓಡುತ್ತಾ? – ‘ಡಬಲ್ ಎಂಜಿನ್ ಸರ್ಕಾರ’ ಮುಖ್ಯ ಎಂದ ಮೋದಿ
ಶೆಟ್ಟರ್‌ಗೆ ಬಿಜೆಪಿ ಎಲ್ಲಾ ಅಧಿಕಾರಿವನ್ನೂ ಕೊಟ್ಟಿತ್ತು. ಎಲ್ಲವನ್ನೂ ಪಡೆದು ಈಗ ಪಕ್ಷ ಬಿಟ್ಟು ಹೋಗಿದ್ದಾರೆ. ನಂಬಿಕೆ ದ್ರೋಹ ಮಾಡಿದ್ದಾರೆ. ಅವರನ್ನು ಸೋಲಿಸುವ ಹೊಣೆ ನನ್ನದು ಎಂದು ಶೆಟ್ಟರ್ ವಿರುದ್ಧ ಯಡಿಯೂರಪ್ಪ ಗುಡುಗಿದ್ದರು.