ವಿಜಯಪುರ: ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರು ಸಿಎಂ ಆದ ಸಂದರ್ಭದಲ್ಲಿ ಇಡೀ ಪ್ರಪಂಚಕ್ಕೆ ಮಾಡಿದ್ದು ಮೋಸ. ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ( K S Eshwarappa) ವಿಜಯಪುರದಲ್ಲಿ (Vijayapura) ಹೇಳಿದರು.
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದೇಶಿ ಕ್ರಿಸ್ಚಿಯನ್ ಮಷಿನರಿಗಳಿಂದ ಈ ತರಹ ನಡೆದಿದೆ. ಹಿಂದುತ್ವ ಪ್ರತಿಪಾದಕರಿಗೆ, ಹಿಂದೂಗಳ ಶ್ರದ್ಧೆಗೆ ಭಂಗ ತರುವ ಕೆಲಸ ಮಾಡಿದ್ದಾರೆ. ಈಗಲೂ ನಾವು ಮಾಡಿಲ್ಲ ಎಂದು ಹೇಳುತ್ತಾರೆ. ಲ್ಯಾಬ್ ರಿಪೋರ್ಟ್ ಬಗ್ಗೆ ಇವರಿಗೆ ನಂಬಿಕೆ ಇಲ್ಲವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್ ಕೊಡಲು ಸರ್ಕಾರ ಪ್ಲ್ಯಾನ್!
ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ಇದು ಅಂತ್ಯವಾಗಬೇಕು. ಇದರಲ್ಲಿ ವಿದೇಶಿ ಸಂಚಿದೆ, ಈ ಪ್ರಕರಣ ಸಿಬಿಐಗೆ (CBI) ತನಿಖೆಗೆ ಕೊಡಬೇಕು. ದೇವರ ದಯೆಯಿಂದ ಇಡೀ ದೇಶದ ಎಲ್ಲ ಪಕ್ಷದ ನಾಯಕರು ಇದನ್ನು ಖಂಡಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಹೇಳಿದ್ದಾರೆ. ತಿರುಪತಿ ತಿಮ್ಮಪ್ಪನ ಬಗ್ಗೆ ಇರುವ ಶ್ರದ್ಧೆಯಿಂದ ಎಲ್ಲರೂ ಇದನ್ನು ಖಂಡಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ
ಬಿಜೆಪಿ (BJP) ಪಕ್ಷ ನನ್ನ ತಾಯಿ ಇದ್ದ ಹಾಗೆ. ಆ ತಾಯಿ ಬಿಟ್ಟು ನಾನು ಬೇರೆ ಯಾವ ಪಕ್ಷಕ್ಕೂ ಹೋಗಲ್ಲ. ಈ ಪಕ್ಷದಲ್ಲಿ ಶುದ್ಧೀಕರಣವಾಗಲಿ ಎಂಬ ಕಾರಣಕ್ಕೆ ನಾನು ಪಕ್ಷದಿಂದ ದೂರ ಇದ್ದೇನೆ. ಇವತ್ತಲ್ಲ ನಾಳೆ ಈ ವಿಚಾರವಾಗಿ ಹೈಕಮಾಂಡ್‌ನವರು ಚಿಂತಿಸಿ ಮಾತನಾಡುವ ನಂಬಿಕೆ ಇದೆ. ಆಗ ನಾನು ಕೂಡಾ ಬಿಜೆಪಿಗೆ ಸೇರುವ ವಿಚಾರವಾಗಿ ತೀರ್ಮಾನ ಮಾಡುವೆ ಎಂದರು. ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ – ಚಿಕ್ಕಬಳ್ಳಾಪುರದಲ್ಲಿ ಗಣೇಶ ವಿಸರ್ಜನೆಗೆ 600 ಪೊಲೀಸರ ಭದ್ರತೆ
ಈಶ್ವರಪ್ಪನವರನ್ನು ಬಿಜೆಪಿಗೆ ಕರೆ ತಂದು ಸಿಎಂ ಮಾಡುತ್ತೇವೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯತ್ನಾಳ್ ಓರ್ವ ಹಿಂದುತ್ವದ ಹುಲಿ. ಅವರ ಪ್ರೀತಿಯ ಮಾತಿಗೆ ನಾನು ಅಭಿನಂದಿಸುವೆ. ಬಿಜೆಪಿಯಲ್ಲಿನ ಅವ್ಯವಸ್ಥೆಯಿಂದ ನಾನು ಪಕ್ಷ ಬಿಟ್ಟೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ನಾನು ಬಿಜೆಪಿ ಬಿಟ್ಟೆ ಎಂದು ತಿಳಿಸಿದರು. ಇದನ್ನೂ ಓದಿ: 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿ – ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ
ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಪೋಲಿಸ್‌ನವರು ರಾಷ್ಟ್ರದೋಹಿ ಚಟುವಟಿಕೆಗಳ ವಿರುದ್ಧ ಎಪ್‌ಐಆರ್ ಹಾಕಿದ್ದು ಅಭಿನಂದನಾರ್ಹ. ದಾವಣಗೆರೆ ಎಸ್ಪಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ಪೊಲೀಸ್ ಇಲಾಖೆಯ ಬಗ್ಗೆ ಭಯ ಹುಟ್ಟಿಸಿದ್ದಕ್ಕೆ ಅಭಿನಂದನೆಗಳು. ಮಾನ್ಯ ಗೃಹ ಸಚಿವರು ಇಂತಹ ಪೋಲಿಸರಿಗೆ ಬೆಂಬಲ, ಪ್ರಶಸ್ತಿ ಕೊಡಬೇಕು. ಗಲಭೆ ಮಾಡಲು ಬಿಡಲ್ಲ ಎಂದು ದಾವಣಗೆರೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಅಭಿನಂದನೆ. ಇಡೀ ರಾಜ್ಯದಲ್ಲಿ ಈ ತರಹ ಪೋಲಿಸರು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಬರ್ಬರ ಹತ್ಯೆ, ಮಚ್ಚಿನೇಟಿಂದ ಪತ್ನಿ ಗಂಭೀರ