ದೆಹಲಿ: ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ.
Advertisement
ಜಗದೀಪ್ ಧನಕರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದಾರೆ. ಇದೀಗ ಮುಂಬರುವ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಹೆಸರನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ರೇವಡಿ ಹಂಚಿ ಮತ ಗಳಿಸುವ ಸಂಸ್ಕೃತಿಯನ್ನು ತೊಡೆದುಹಾಕಬೇಕು: ಮೋದಿ
Advertisement
ಜಗದೀಪ್ ಧನಕರ್ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದರು. ಕೆಲದಿನಗಳ ಹಿಂದೆ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಭೇಟಿಯಾಗಿ ಸುಮಾರು 40 ನಿಮಿಷಗಳ ಮಾತುಕತೆ ನಡೆಸಿದ್ದರು. ಇದೀಗ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
Advertisement
Advertisement
ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಉತ್ತರಾಧಿಕಾರಿಯನ್ನು ನಿರ್ಧರಿಸುವ ಚುನಾವಣೆಗೆ ಜುಲೈ 5 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಯುವಕನನ್ನು ಪ್ರೀತಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾದ ಮುಸ್ಲಿಂ ಯುವತಿ