ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಅವರಿಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 71 ವರ್ಷದ ಧನಕರ್ ಅವರಿಗೆ ಪ್ರಮಾಣವಚನ ಬೋಧಿಸಿದ್ದು, ಧನಕರ್ ಹಿಂದಿಯಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಿರ್ಗಮಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಹಲವು ಗಣ್ಯರು ಪಾಲ್ಗೊಂಡಿದ್ದರು.
Advertisement
Advertisement
1951ರಲ್ಲಿ ಜನಿಸಿದ ಧನಕರ್ ಅವರು ಜೈಪುರದ ಮಹಾರಾಜ ಕಾಲೇಜಿನಿಂದ ಭೌತ ವಿಜ್ಞಾನದಲ್ಲಿ ಪದವಿ ಪಡೆದಿದ್ದಾರೆ. ಜೈಪುರ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದಾರೆ. ಅವರ ಪತ್ನಿಯ ಹೆಸರು ಸುದೇಶ್ ಧನಕರ್ ಮತ್ತು ಅವರಿಗೆ ಒಬ್ಬಳು ಮಗಳಿದ್ದಾರೆ. ಇದನ್ನೂ ಓದಿ: ಲಿಪ್‍ಸ್ಟಿಕ್‍ನಿಂದ ವಾಲ್ ಮೇಲೆ ಡೆತ್ ನೋಟ್ – ಗೃಹಿಣಿ ಆತ್ಮಹತ್ಯೆಗೆ ಕಿರುಕುಳವೇ ಕಾರಣವಾಯ್ತಾ?
Advertisement
Advertisement
ವೃತ್ತಿಯಲ್ಲಿ ವಕೀಲರಾಗಿದ್ದ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದರು. ರಾಜಸ್ಥಾನದ ಝುಂಝುನು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. 1990ರಲ್ಲಿ ಕೇಂದ್ರ ಸಚಿವರಾಗಿ, ರಾಜಾಸ್ಥಾನದ ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ನನ್ನ ತಂದೆ-ತಾಯಿ ಮೆಚ್ಚುವ ರೀತಿ ನಾನು ಕಾಲೇಜು ಜೀವನ ಕಳೆಯಲಿಲ್ಲ: ರಾಕಿಂಗ್ ಸ್ಟಾರ್
1993 ರಿಂದ 1998ರ ವರೆಗೆ ರಾಜಾಸ್ಥಾನ ವಿಧಾನಸಭೆಯ ಸದಸ್ಯರೂ ಆಗಿದ್ದರು. ಜನತಾ ದಳ (ಜೆಡಿಯು)ದಿಂದ ರಾಜಕೀಯ ಜೀವನ ಆರಂಭಿಸಿದ್ದ ಅವರು, ನಂತರ ಕಾಂಗ್ರೆಸ್ ಸೇರಿದ್ದರು. 2003ರಲ್ಲಿ ಕಾಂಗ್ರೆಸ್ ತೊರೆದು ಅವರು ಬಿಜೆಪಿ ಸೇರಿದರು. 2019ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಅವರನ್ನು ನೇಮಿಸಲಾಯಿತು. ಅಧಿಕಾರ ವಹಿಸಿಕೊಂಡ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದೊಂದಿಗಿನ ತಿಕ್ಕಾಟದಿಂದಲೇ ಆಗಾಗ ಸುದ್ದಿಯಾಗುತ್ತಿದ್ದರು.
ಉಪ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಚುನಾವಣೆಯಲ್ಲಿ ಮಣಿಸಿದ್ದಾರೆ.