ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಧನಕರ್‌ ಆಗಮ‌ನ

Public TV
1 Min Read
jagdeep dhankhar

ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಅವರು ಇಂದು (ಶುಕ್ರವಾರ) ಆಗಮಿಸಿದ್ದಾರೆ.

ಹುಬ್ಬಳ್ಳಿಗೆ (Hubballi) ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Pralhad Joshi) ಹೂ ಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರು. ಇದನ್ನೂ ಓದಿ: ಜಾತಿಗಣತಿ ವರದಿಯನ್ನು ಸರ್ಕಾರ ಅನುಷ್ಠಾನಕ್ಕೆ ತರಬಾರದು: ಒಕ್ಕಲಿಗರ ಸಮಿತಿ ಎಚ್ಚರಿಕೆ

ಉಪರಾಷ್ಟ್ರಪತಿ ಅವರು ಸಂಜೆ ಧಾರವಾಡದ ಐಐಟಿಯಲ್ಲಿ ಪ್ರಮುಖ ಸೌಲಭ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ, ಎಂ.ಎಂ.ಜೋಶಿ ನೇತ್ರಾಲಯದ ನೂತನ ಸೂಪರ್ ಸ್ಪೆಷಾಲಿಟಿ ಐ ಕೇರ್ ಆಸ್ಪತ್ರೆ ‘ಐಸಿರಿ’ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- KRSಗೆ ಅಕ್ರಮವಾಗಿ ಅಳವಡಿಸಿದ್ದ ಮೋಟಾರ್‌ಗೆ ಕರೆಂಟ್ ಕಟ್, ಪಂಪ್ ಸೀಜ್

Share This Article