ಹುಬ್ಬಳ್ಳಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ (Five State Elections) ಮೇಲೂ ಆಗಿದೆ. ಆದ್ದರಿಂದಲೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿ ರಿಪೇರಿ ಮಾಡಲಾರದಷ್ಟೂ ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagdish Shettar) ಹೇಳಿದ್ದಾರೆ.
Advertisement
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು, ವೀಕ್ಷಕರು ಸಹ ಬಂದಿರಲಿಲ್ಲ ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ. ಯಾರೋ ಒಬ್ಬರನ್ನ ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು (BY Vijayendra) ಮಾಡಿದ್ದಾರೆ. ಆದ್ರೆ ರಾಜ್ಯಾಧ್ಯಕ್ಷ ಸ್ಥಾನಾಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತು. ಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್ಟಿಎಸ್
Advertisement
Advertisement
ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ ಬಹಳ ಹಿಂದಿನಿಂದಲೂ ನಡೆದಿದೆ. ಪಕ್ಷಕ್ಕಾಗಿ ಸಂಘಟನೆ ಮಾಡಿದವರನ್ನು, ದುಡಿದವರನ್ನು ದೂರವಿಡಲಾಗುತ್ತಿದೆ. ಸದಾನಂದ ಗೌಡರನ್ನು ದೆಹಲಿಗೆ ಕರೆಸಿ ಮೂರು ದಿನ ಕಾಯಿಸಿದರು. 5 ನಿಮಿಷ ಮಾತನಾಡುವಷ್ಟು ಸೌಜನ್ಯವನ್ನೂ ತೋರಲಿಲ್ಲ. ಬಿಜೆಪಿ ಹಿರಿಯರನ್ನ ನಡೆಸಿಕೊಳ್ಳುವ ರೀತಿಗೆ ಇದೊಂದು ಉದಾಹರಣೆ. ಎಲ್.ಕೆ ಅಡ್ವಾಣಿ ಮುರುಳಿಮನೋಹರ ಜೋಷಿ ಮೊದಲಾದವರಿಗೆ ರಾಜಕೀಯ ನಿವೃತ್ತಿ ಕೊಟ್ಟುಬಿಟ್ಟರು. ನನಗೆ, ಲಕ್ಷ್ಮಣ್ ಸವದಿ ಮತ್ತು ಈಶ್ವರಪ್ಪಗೆ ಕರ್ನಾಟಕದಲ್ಲಿ ಟಿಕೆಟ್ ಕೊಡಲಿಲ್ಲ. ನನಗೆ ಟಿಕೆಟ್ ತಪ್ಪಿಸಲು ಏನು ಕಾರಣ ಅಂತ ಇದುವರೆಗೂ ಹೇಳಿಲ್ಲ. ಇದರ ಪರಿಣಾಮ ಏನಾಯ್ತು ಅಂತ ಇಡೀ ಜಗತ್ತಿಗೆ ಗೊತ್ತಿದೆ. ಬಿಜೆಪಿ ವರಿಷ್ಠರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಅನ್ನೋ ಆಸೆಯಿತ್ತು. ಆದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದು ವಾಗ್ದಾಳಿ ನಡೆದಿದ್ದಾರೆ. ಇದನ್ನೂ ಓದಿ: ಮಾಜಿ ಎಂಎಲ್ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್
Advertisement
ಈಗ ಪಂಚ ರಾಜ್ಯಗಳ ಚುನಾವಣೆಯಲ್ಲಿ ಹಿರಿಯರಿಗೆ ಮಣೆ ಹಾಕಲಾಗಿದೆ. 70-75 ವಯಸ್ಸಿನವರಿಗೂ ಟಿಕೆಟ್ ನೀಡಲಾಗಿದೆ. ಅವರಿಗೆ ಯಾಕೆ ಟಿಕೆಟ್ ಕೊಟ್ಟರು? ನಿಯಮ ಎಲ್ಲರಿಗೂ ಒಂದೇ ಅನ್ವಯ ಆಗಬೇಕಲ್ಲವೇ? ಅಧಿಕಾರ ಆಸೆಯಲ್ಲಿ ಎಲ್ಲ ನಿಯಮಗಳನ್ನ ಗಾಳಿಗೆ ತೂರುತ್ತಾರೆ. ವಯಸ್ಸಿನ ನೆಪದಲ್ಲಿ ಅಡ್ವಾಣಿ, ಮುರಳಿ ಮನೋಹರ್ ಜೋಶಿಯವರನ್ನು ಮನೆಗೆ ಕಳಿಸಿದ್ರು. ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ. ಜಗದೀಶ್ ಶೆಟ್ಟರ್ ಎಫೆಕ್ಟ್ ಪಂಚ ರಾಜ್ಯಗಳಲ್ಲಿಯೂ ಆಗಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದರಿಂದ ಯಾವುದೇ ಬದಲಾವಣೆ ಆಗಲ್ಲ. ಬಿಜೆಪಿ ಕುಸಿತಿರುವ ಸಂದರ್ಭದಲ್ಲಿ ಹೆಚ್ಚಿನ ಶಕ್ತಿ ತೋರಿಸಲು ಸಾಧ್ಯವಿಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ತುಮಕೂರಿನಲ್ಲೊಂದು ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ