ನವರಸ ನಾಯಕ, ನಟ ಜಗ್ಗೇಶ್ (Actor Jaggesh) ಅವರು ಸಿಟಿಸ್ಕ್ಯಾನ್ ಮಾಡಿಸುತ್ತಿರುವ ಕೆಲವು ಚಿತ್ರಗಳನ್ನ ಟ್ಟಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಸ್ವತಃ ಜಗ್ಗೇಶ್ ತಮ್ಮ ಆರೋಗ್ಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಕೇದಾರ್ನಾಥ-ಬದ್ರಿನಾಥ ಯಾತ್ರೆಗೆ ನಟ ಜಗ್ಗೇಶ್ ತೆರಳಿದ್ದರು. ಅಲ್ಲಿ ಬೆಟ್ಟ ಹತ್ತಿ ಇಳಿದ ಕಾರಣ ಹಾಗೂ ಸತತ ಪ್ರಯಾಣ, ನಡೆದಾಟದ ಕಾರಣದಿಂದ ಜಗ್ಗೇಶ್ಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಬೆನ್ನು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಜಗ್ಗೇಶ್ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಸಿಟಿಸ್ಕ್ಯಾನ್ಗೆ ಒಳಗಾಗಿದ್ದಾರೆ ಎನ್ನಲಾಗಿದೆ.
L4L5 compression ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲು ಭಾಗಿಯಾಗಲು ಸಾಧ್ಯವಾಗಲಿಲ್ಲಾ!
2ವಾರ pysiyo ಚಿಕಿತ್ಸೆ ಹಾಗು bedrest ಕಡ್ಡಾಯ ಎಂದು ಡಾ ಸಲಹೆ ನೀಡಿದ್ದಾರೆ..
ನಿಮ್ಮ ಮಾಹಿತಿಗಾಗಿ ಧನ್ಯವಾದ
ಶುಭಸಂಜೆ???? pic.twitter.com/KZgGvVffj6
— ನವರಸನಾಯಕ ಜಗ್ಗೇಶ್ (@Jaggesh2) September 29, 2023
ತಾವು ಸಿಟಿಸ್ಕ್ಯಾನ್ಗೆ ಒಳಗಾಗುತ್ತಿರುವ ಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ನಟ ಜಗ್ಗೇಶ್, L4L5 ಕಂಪ್ರೆಷನ್ ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲೂ ಭಾಗಿಯಾಗಲು ಸಾಧ್ಯವಾಗಲಿಲ್ಲ. 2 ವಾರ ಫಿಸಿಯೋ ಚಿಕಿತ್ಸೆ ಹಾಗೂ ಬೆಡ್ರೆಸ್ಟ್ ಕಡ್ಡಾಯ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ನಟ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಹನಿಮೂನ್ ಪ್ಲ್ಯಾನ್ ಕ್ಯಾನ್ಸಲ್ ಆಗಿದ್ದೇಕೆ?
ತೋತಾಪುರಿ-2 ಸಿನಿಮಾ ಪ್ರಚಾರ ಮತ್ತು ಕಾವೇರಿ ಹೋರಾಟದಲ್ಲಿ ಯಾಕೆ ಜಗ್ಗೇಶ್ ಭಾಗಿಯಾಗಿಲ್ಲ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ಸದ್ಯ ಅನಾರೋಗ್ಯದ ನಿಮಿತ್ತ ನಟ ವಿಶ್ರಾಂತಿಯಲ್ಲಿದ್ದಾರೆ.
ಕಾವೇರಿ ನೀರಿನ ಹೋರಾಟದಲ್ಲಿ ಶಿವರಾಜ್‌ಕುಮಾರ್, ದರ್ಶನ್, ಧ್ರುವ ಸರ್ಜಾ, ಸುಂದರ್ ರಾಜ್ ದಂಪತಿ, ಪದ್ಮ ವಾಸಂತಿ, ಶ್ರೀನಾಥ್, ಶೃತಿ, ಸೃಜನ್ ಲೋಕೇಶ್, ತರುಣ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]