ಮಂಡ್ಯ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಸಿಐಟಿಯು ಹಾಗೂ ರೈತ ಸಂಘಟನೆಗಳ ಸಹಯೋಗದೊಂದಿಗೆ ಮಂಡ್ಯ ನಗರದಲ್ಲಿ ನಡೆಯಿತು. ಈ ವೇಳೆ ಹಳೇ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭಾರೀ ಹೈಡ್ರಾಮ ನಡೆಯಿತು.
ಸಿಐಟಿಯು ಹಾಗೂ ರೈತ ಸಂಘದ ನೂರಾರು ಕಾರ್ಯಕರ್ತರು ನಗರದ ಪ್ರಮುಖ ಸಂಜಯ್ ವೃತ್ತದಲ್ಲಿ ಜಮಾಯಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಬಲವಂತವಾಗಿ ರೈತರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರವು ಸಾಮಾನ್ಯ ಜನ ಹಾಗೂ ರೈತರನ್ನು ನಿರ್ಲಕ್ಷಿಸಿ ಕಾರ್ಪೊರೇಟ್ ಕಂಪನಿಗಳ ಪರವಾಗಿ ನಿಂತಿದೆ ಎಂದು ಹೋರಾಟಗಾರರು ತೀವ್ರವಾಗಿ ಆರೋಪಿಸಿದರು. ಪ್ರತಿಭಟನೆಯ ವೇಳೆ ಹೋರಾಟಗಾರರು ದಿಢೀರನೆ ಹಳೆ ಮೈಸೂರು-ಬೆಂಗಳೂರು ಹೆದ್ದಾರಿಯನ್ನು ತಡೆದು ಧರಣಿ ಕುಳಿತಿದ್ದರಿಂದ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ಇದನ್ನೂ ಓದಿ: ಮಳೆ ಬಂದರೆ ಬದುಕೇ ದುಸ್ತರ… ತಲುಪದ ಅಭಿವೃದ್ಧಿಯ ಬೆಳಕು… ಅನೆಕಲ್‌ತಮಲೆಯ 7 ಕುಟುಂಬಗಳ ಕಣ್ಣೀರಿನ ಕಥೆ!

ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗದಂತೆ ತಡೆಯಲು ಬಂದ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ನಡೆಯಿತು. ರಸ್ತೆಯಲ್ಲಿ ಕುಳಿತು ಪಟ್ಟು ಹಿಡಿದಿದ್ದ ಮಹಿಳಾ ಪ್ರತಿಭಟನಾಕಾರರನ್ನ ತೆರವುಗೊಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೊನೆಗೆ ಪೊಲೀಸರು ಮಹಿಳಾ ಪ್ರತಿಭಟನಾಕಾರರನ್ನ ಕೈ-ಕಾಲು ಹಿಡಿದು ಎತ್ತೊಯ್ದು ಪೊಲೀಸ್ ವಾಹನಗಳಿಗೆ ತುಂಬಿದರು. ಚಳವಳಿನಿರತ ಪ್ರಮುಖ ನಾಯಕರನ್ನ ಹಾಗೂ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: ಆಶ್ರಮ ಶಾಲೆಯಲ್ಲಿ 6 ವಿದ್ಯಾರ್ಥಿನಿಯರಿಗೆ ಹಾವು ಕಡಿತ – ಮೂವರ ಸಾವು; ಓರ್ವಳಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

