ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renukaswamy Murder Case) ಸಂಬಂಧ ಜೈಲು ಸೇರಿರುವ ನಟ ದರ್ಶನ್ (Darshan) ಮನೆಯ ಊಟ ಬೇಕೆಂದು ಹೈಕೋರ್ಟ್‌ಗೆ (High Court) ರಿಟ್ ಅರ್ಜಿ ಸಲ್ಲಿಸಿದ್ದಾರೆ.
ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೇ ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್‌ಐಆರ್
Advertisement
Advertisement
ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ತಿಂದಾಗ ಅತಿಸಾರ, ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ದರ್ಶನ್ ಹೈಕೋರ್ಟ್‌ಗೆ ಕಾರಣಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಸವಾಲಿಗೆ ಸವಾಲು ಹಾಕುವುದು ನನ್ನ ಡಿಎನ್‌ಎಯಲ್ಲಿದೆ: ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೋದಿ ಮಾತು
Advertisement
Advertisement
ಗುರುವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಇದನ್ನೂ ಓದಿ: ಮುಡಾ ಭ್ರಷ್ಟಾಚಾರ ಪ್ರಕರಣ – ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು