ನವದೆಹಲಿ: ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ (Hemant Soren) ಅವರ ಪತ್ನಿ ಕಲ್ಪನಾ ಸೊರೆನ್ (Kalpana Soren) ಅವರು ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಸುನಿತಾ ಅವರು, ಕಲ್ಪನಾ ಸೊರೆನ್ ಭೇಟಿಯ ನಂತರ, ದೆಹಲಿಯ ಸಚಿವೆ ಅತಿಶಿ ಅವರು ಎಕ್ಸ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಸುನಿತಾ ಅವರು, ಕಲ್ಪನಾ ಸೊರೆನ್ ಅವರನ್ನು ನೋಡಿದ ನಂತರ ಬಿಜೆಪಿಯು ಹೆದರುತ್ತಿದೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳ ನೇತೃತ್ವ ವಹಿಸುತ್ತಿರುವ ಸೊರೆನ್ ಮತ್ತು ಕೇಜ್ರಿವಾಲ್ ವಿರುದ್ಧ ಕೇಂದ್ರೀಯ ಸಂಸ್ಥೆಗಳ ಕ್ರೂರ ನಡೆಗೆ ಬೆದರದ ಇಬ್ಬರು ಬಲಿಷ್ಠ ಮಹಿಳೆಯರ ಈ ವೀಡಿಯೊವನ್ನು ನೋಡಿದರೆ ಬಿಜೆಪಿ ಭಯಪಡಲಿದೆ ಎಂದು ಅವರು ಬರೆದುಕೊಂಡಿದ್ದಾರೆ.
Advertisement
Advertisement
ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯದ ಕ್ರಮದ ನಂತರ ಕಲ್ಪನಾ ಸೊರೆನ್, ಸುನೀತಾ ಕೇಜ್ರಿವಾಲ್ ಅವರೊಂದಿಗೆ ಚರ್ಚಿಸಿದ್ದಾರೆ. ಬಳಿಕ ಅವರು ಎಕ್ಸ್‍ನಲ್ಲಿ ಸುನೀತಾ ಕೇಜ್ರಿವಾಲ್ ಅವರ ಸಮಸ್ಯೆಗಳನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರೊಂದಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬಲು ಪ್ರಯತ್ನಿಸಿದೆ. ಸ್ನೇಹಿತೆಯಾಗಿ ಅವರ ಸಮಸ್ಯೆಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Advertisement
Advertisement
ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳ ವೇಳಾಪಟ್ಟಿ ಪ್ರಕಟವಾದಾಗ ಅಕ್ರಮ ಬಂಧನದ ಈ ಘಟನೆ ಪ್ರಜಾಸತ್ತಾತ್ಮಕ ದೇಶಕ್ಕೆ ಸಾಮಾನ್ಯ ಘಟನೆಯಲ್ಲ. ಬಿಕ್ಕಟ್ಟಿನ ಈ ಸಮಯದಲ್ಲಿ, ಹೇಮಂತ್ ಸೊರೆನ್ ನೇತೃತ್ವದಲ್ಲಿ ಇಡೀ ಜಾರ್ಖಂಡ್ ಕೇಜ್ರಿವಾಲ್ ಅವರೊಂದಿಗೆ ನಿಂತಿದೆ ಎಂದು ಕಲ್ಪನಾ ಸೊರೆನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.