ಲಕ್ನೋ: ಮಾಜಿ ಸಂಸದ, ಗ್ಯಾಂಗ್ ಸ್ಟಾರ್ ಅತಿಕ್ ಅಹ್ಮದ್ (Atiq Ahmed) ಪುತ್ರ ಅಸಾದ್ (Asad) ಉತ್ತರ ಪ್ರದೇಶ (Uttar pradesh) ಪೊಲೀಸರ ಎನ್‌ಕೌಂಟರ್‌ಗೆ (Encounter) ಬಲಿಯಾಗಿದ್ದಾನೆ.
ಉಮೇಶ್ ಪಾಲ್ ಹತ್ಯೆ ಪ್ರಕರಣದ ( Umesh Pal Murder Case ) ಪ್ರಮುಖ ಆರೋಪಿಗಳಾದ ಅಸಾದ್ ಮತ್ತು ಗುಲಾಂ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. ನಾಪತ್ತೆಯಾಗಿದ್ದ ಈ ಇಬ್ಬರನ್ನು ಇಂದು ಝಾನ್ಸಿಯಲ್ಲಿ ಎನ್‌ಕೌಂಟರ್ ಮಾಡಿ ಹತ್ಯೆ ಮಾಡಲಾಗಿದೆ.
2005ರ ಬಹುಜನ ಸಮಾಜ ಪಾರ್ಟಿಯ (Bahujan Samaj Party) ಶಾಸಕ ರಾಜುಪಾಲ್ (Raju Pal) ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ (Umesh Pal) ಅವರನ್ನು ಫೆ.24 ರಂದು ಅತಿಕ್ ಅಹಮ್ಮದ್ ಗ್ಯಾಂಗ್ ಸದಸ್ಯರು ಗುಂಡಿಟ್ಟು ಹತ್ಯೆ ಮಾಡಿದ್ದರು.
ಹತ್ಯೆಯಾದ ಇಬ್ಬರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್
ಏನಿದು ಪ್ರಕರಣ?
2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಉಮೇಶ್ ಪಾಲ್ ಪ್ರಮುಖ ಸಾಕ್ಷಿಯಾಗಿದ್ದರು. ಫೆ.24 ರಂದು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಇವರಿಬ್ಬರೂ ಸದ್ಯ ಜೈಲಿನಲ್ಲಿದ್ದಾರೆ.
ಉಮೇಶ್ ಪಾಲ್ ಅವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಿದ್ದರು.