ನವದೆಹಲಿ: ಕೆನಡಾದಲ್ಲಿ (Canada) ಖಲಿಸ್ತಾನಿ ಉಗ್ರ ಸುಖದೂಲ್ ಸಿಂಗ್ (Khalistani Terrorist Sukhdool Singh) ಹತ್ಯೆಯ ಹೊಣೆಯನ್ನು ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಹೊತ್ತುಕೊಂಡಿದೆ.
ಈ ಸಂಬಂಧ ಪೋಸ್ಟ್ ಪ್ರಕಟಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿದ್ದುಖೇರಾ ಹತ್ಯೆಯಲ್ಲಿ ಸುಖದೂಲ್ ಸಿಂಗ್ ಪ್ರಮುಖ ಪಾತ್ರವಹಿಸಿದ್ದ. ಈ ಕಾರಣಕ್ಕೆ ಆತನನ್ನು ಹತ್ಯೆ ಮಾಡಲಾಗಿದೆ. ಆತನ ಪಾಪಗಳಿಗೆ ಶಿಕ್ಷೆ ನೀಡಲಾಗಿದೆ ಎಂದು ಬರೆಯಲಾಗಿದೆ.
ಬುಧವಾರ ರಾತ್ರಿ ನಡೆದ ಹಿಂಸಾಚಾರದಲ್ಲಿ ಸುಖದೂಲ್ ಸಿಂಗ್‌ನನ್ನ ಹತ್ಯೆ ಮಾಡಲಾಗಿತ್ತು. ಖಲಿಸ್ತಾನ್ ಚಳವಳಿಯ ನಾಯಕನಾಗಿದ್ದ ಈತ 2017ರಲ್ಲಿ ನಕಲಿ ಪಾಸ್‌ಪೋರ್ಟ್ ಮೂಲಕ ಕೆನಡಾಕ್ಕೆ ಪರಾರಿಯಾಗಿದ್ದ.
ಬುಧವಾರ ರಾಷ್ಟ್ರೀಯ ತನಿಖಾ ದಳ (NIA) 43 ಮಂದಿ ಖಲಿಸ್ತಾನಿ ಉಗ್ರರ ಫೋಟೋ ರಿಲೀಸ್ ಮಾಡಿತ್ತು. ಈ ಪಟ್ಟಿಯಲ್ಲಿ ಸುಖದೂಲ್ ಸಿಂಗ್ ಫೋಟೋ ಇತ್ತು. ಇದನ್ನೂ ಓದಿ: ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಸರ್ಕಾರಿ ಏಜೆಂಟರಿಗೆ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸಂಸತ್ತಿಗೆ ತಿಳಿಸಿದ ಬಳಿಕ ಕೆನಡಾ ಮತ್ತು ಭಾರತದ ಸಂಬಂಧ ಹಳಸಿದೆ. ಈ ಸಂದರ್ಭದಲ್ಲೇ ಸುಖದೂಲ್ ಸಿಂಗ್ ಹತ್ಯೆ ನಡೆದಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]