ಮುಂಬೈ: ಬಂಧನದಲ್ಲಿರುವ ಸ್ವತಂತ್ರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ಪತಿ ರವಿ ರಾಣಾ ದಂಪತಿಗೆ ಒಂದಾದಂತೆ ಒಂದು ಅಂಕಷ್ಟಗಳು ಎದುರಾಗುತ್ತಿದ್ದು, ಇದೀಗ ಮುಂಬೈ ನಲ್ಲಿರುವ ತಮ್ಮ ನಿವಾಸದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವುದಾಗಿ ಬೃಹತ್ ಮುಂಬೈ ಮಹಾನಗರಪಾಲಿಕೆ (BMC) ನೋಟಿಸ್ ಜಾರಿಗೊಳಿಸಿದೆ.
Advertisement
ನೋಟೀಸ್ ಪ್ರಕಾರ ಅಧಿಕಾರಿಗಳು ಮೇ 4ರಂದು ಯಾವುದೇ ಸಮಯದಲ್ಲಿ, ಯಾವುದೇ ಕಟ್ಟಡಕ್ಕೆ ಭೇಟಿ ನೀಡಿ ತಪಾಸಣೆ ನಡೆಸಬಹುದು. ಅಕ್ರಮ ಆಗಿದ್ದರೆ ಬದಲಾವಣೆ ಮಾಡುವುದಕ್ಕೂ ಕ್ರಮ ಕೈಗೊಳ್ಳಬಹುದು ಎಂದು ಹೇಳಲಾಗಿದೆ. ಇದನ್ನೂ ಓದಿ: ಸೊಪೋರ್‌ನಲ್ಲಿ ಮೂವರು ಲಷ್ಕರ್ ಉಗ್ರರು ಅರೆಸ್ಟ್
Advertisement
ಹಿನ್ನೆಲೆ ಏನು?: ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ್ದಾಗಿ ಮಹಾರಾಷ್ಟ್ರದ ಅಮರಾವತಿಯ ಸಂಸದ ಬದ್ನೇರಾ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ ನವನೀತ್ ರಾಣಾ ಅವರನ್ನು ಏಪ್ರಿಲ್ 23ರಂದು ಬಂಧಿಸಲಾಗಿದೆ.
Advertisement
Advertisement
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವ ಯೋಜನೆಯನ್ನು ಈ ದಂಪತಿ ಹಾಕಿಕೊಂಡಿದ್ದರು. ಆದರೆ ಅವರನ್ನು ಬಂಧಿಸಿದ ಮೇಲೆ ಕಾರ್ಯಕ್ರಮವನ್ನು ರದ್ದುಗೊಳಿಸಿಲಾಯಿತು. ಇದನ್ನೂ ಓದಿ: ದೇಶದ ಪರಿಸ್ಥಿತಿ ಚೆನ್ನಾಗಿಲ್ಲ, ಭಯಪಡಬೇಡಿ, ಹೋರಾಟ ಮುಂದುವರೆಸಿ: ಮಮತಾ ಬ್ಯಾನರ್ಜಿ
ಪ್ರಸ್ತುತ ದಂಪತಿ ವಿರುದ್ಧ ಸೆಕ್ಷನ್ 153(A) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರಿಬ್ಬರನ್ನೂ ಭಾನುವಾರ ಬಾಂದ್ರಾದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಬ್ಬರನ್ನೂ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಸರ್ಕಾರಿ ಯಂತ್ರಕ್ಕೆ ಸವಾಲು ಹಾಕಿದ ಮತ್ತು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಟೀಕೆಗಳನ್ನು ಮಾಡಿದ್ದರಿಂದ ಅವರ ವಿರುದ್ಧ ಐಪಿಸಿ ಸೆಕ್ಷನ್ 124-A (ದೇಶದ್ರೋಹ) ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ತಿಳಿಸಿದ್ದರು.