ರಜನಿಕಾಂತ್ (Rajinikanth) ನಟನೆಯ ಜೈಲರ್ (Jailer) ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು (Success) ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದಾರೆ.
ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ. ಸ್ವತಃ ತಾವೇ ಎಲ್ಲರಿಗೂ ಕೇಕ್ (Cake)ತಿನ್ನಿಸಿದ್ದಾರಂತೆ.
ರಜನಿಕಾಂತ್ ಮೇನಿಯಾ ನಿಲ್ಲುತ್ತಿಲ್ಲ. ಒಂದಲ್ಲ ಎರಡಲ್ಲ. ಭರ್ತಿ ಹದಿನಾರು ದಿನಗಳು ಮುಗಿದಿದೆ. ಆದರೂ ಜನರು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದಾರೆ. ನೋಡಿದವರೇ ಮತ್ತೆ ಮತ್ತೆ ನೋಡುತ್ತಿದ್ದಾರೆ. ರಜನಿ ಯುಗ ಮುಗಿಯಿತು ಎಂದವರಿಗೆ ಕಪಾಳಕ್ಕೆ ಬಾರಿಸುವಂಥ ಉತ್ತರ ಕೊಟ್ಟಿದೆ ಜೈಲರ್. ವಿಶ್ವಾದ್ಯಂತ ಇಲ್ಲಿವರೆಗೆ 600 ಕೋಟಿ ರೂಪಾಯಿ ಗಳಿಸಿದೆ. ಹಾಗಿದ್ದರೆ ಕರ್ನಾಟಕದಲ್ಲಿ(Karnataka) ಎಷ್ಟು ಕೋಟಿ? ಉಸಿರು ಬಿಗಿ ಹಿಡಿಯಿರಿ. ಅನಾಮತ್ತು ಐವತ್ತು ಕೋಟಿಗೂ ಅಧಿಕ ಖಜಾನೆಗೆ ಸೇರಿಸಿದೆ. ದಟ್ ಈಸ್ ತಲೈವಾ ತಾಕತ್ತು.
ಮೊದಲ ದಿನ ಒಟ್ಟು 500 ಪ್ರದರ್ಶನ ಕಂಡಿತ್ತು ಜೈಲರ್. ಮೊದಲ ವಾರದ ನಂತರ ಪ್ರದರ್ಶನ ಸಂಖ್ಯೆ ಕಮ್ಮಿ ಆಗಬಹುದು. ಹೀಗಂತ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಐದು ನೂರರಲ್ಲಿ ಒಂದೇ ಒಂದು ಪ್ರದರ್ಶನ ಕಮ್ಮಿಯಾಗಿಲ್ಲ. ಜನರು ಸಿನಿಮಾ ನೋಡುವುದನ್ನು ನಿಲ್ಲಿಸುತ್ತಿಲ್ಲ. ರಜನಿ ಅಷ್ಟೊಂದು ಮೋಡಿ ಮಾಡಿದ್ದಾರೆ. ಏನಾದರಾಗಲಿ. ಹಳೇ ರಜನಿಕಾಂತ್ ಮತ್ತೆ ಸಿಕ್ಕಿದ್ದಾರೆ. ಫ್ಯಾನ್ಸ್ ಕೇಕೆ ಹಾಕುತ್ತಿದ್ದಾರೆ. ನಿರ್ದೇಶಕ ನೆಲ್ಸನ್ ನಿರ್ದೇಶನಕ್ಕೆ ಭೇಷ್ ಎಂದಿದ್ದಾರೆ.
ಸಿನಿಮಾರಂಗದ ಆರಾಧ್ಯ ದೈವ ರಜನಿಕಾಂತ್ ಅವರನ್ನ ಜೈಲರ್ (Jailer) ಸಿನಿಮಾ ಮೂಲಕ ಮತ್ತೆ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ತಲೈವಾ ಮತ್ತೆ ತೆರೆಯ ಮೇಲೆ ಮಿಂಚೋದಕ್ಕೆ ಸೂಕ್ತ ಸಿನಿಮಾ ಅಂತಿದ್ದಾರೆ. ಈಗ ಅವರ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]