ಚಿಕ್ಕೋಡಿ: ಹಿರೇಕೋಡಿ ನಂದಿ ಪರ್ವತ ಆಶ್ರಮದ (Nandi Parvatha Ashram) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜುಲೈ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ್ಗೆ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯ ನ್ಯಾಯಾಧೀಶ ಚಿದಾನಂದ ಬಡಿಗೇರ ಆದೇಶ ಹೊರಡಿಸಿದ್ದಾರೆ.
- Advertisement 2
- Advertisement 3
7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳನ್ನು ಸೋಮವಾರ ಪೊಲೀಸರು ಕೋರ್ಟ್ಗೆ ಹಾಜರು ಪಡಿಸಿದ್ದರು. ಚಿಕ್ಕೋಡಿ (Chikkodi) ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಪೊಲೀಸರು ಬಳಿಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಅಂಡರ್ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಬಟ್ಟೆಗಳನ್ನು ಸುಟ್ಟಿದ್ದ ಹಂತಕರು
- Advertisement 4
ಚಿಕ್ಕೋಡಿ ಸಿಪಿಐ ಆರ್ಆರ್ ಪಾಟೀಲ್ ನೇತೃತ್ವದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಸಿಲುಕಿಕೊಂಡ ಕಾರನ್ನು ಕಿ.ಮೀ ಗಟ್ಟಲೆ ಎಳೆದುಕೊಂಡು ಹೋದ ಟಿಪ್ಪರ್ ಚಾಲಕ
Web Stories