ನವದೆಹಲಿ: ಕ್ರಾಂತಿಕಾರಿ ಜೈನಮುನಿ ತರುಣ್ ಸಾಗರ್ ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
51 ವರ್ಷ ವಯಸ್ಸಿನ ಮುನಿ ನವದೆಹಲಿಯ ಕೃಷ್ಣ ನಗರದ ರಾಧಾಪುರಿ ಜೈನ ಆಶ್ರಮದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಜಾಂಡೀಸ್ ಹಾಗೂ ಇತರ ಕೆಲ ಕಾಯಿಲೆಗಳಿಂದ ಬಳುತ್ತಿದ್ದ ಸಾಗರ್ ಅವರು, ಕಳೆದ 3 ವಾರಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀರಾ ಹದಗೆಟ್ಟಿದ್ದರೂ ಕಳೆದ ಎರಡು ದಿನಗಳಿಂದ ಔಷಧವನ್ನೂ ಸೇವಿಸದೆ ಇದ್ದರು. ಜೊತೆಗೆ ಜೈನ ಮಂದಿರಕ್ಕೆ ತಮ್ಮನ್ನು ಕರೆದೊಯ್ಯುವಂತೆ ಅವರೇ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅವರನ್ನು ಜೈನ ಮಂದಿರಕ್ಕೆ ಕರೆದುಕೊಂಡು ಬರಲಾಗಿತ್ತು.
Advertisement
Jain Muni Tarun Sagar passed away this morning in Delhi. He was 51 years old. pic.twitter.com/xLn14g569u
— ANI (@ANI) September 1, 2018
Advertisement
ಜೈನ ಸಮುದಾಯದಲ್ಲಿ ಅನುಯಾಯಿಗಳನ್ನು ಹೊಂದಿರುವ ಮುನಿ ತರುಣ್ ಸಾಗರ್ ಜಾಂಡೀಸ್ ನಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಮೂರು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮುನಿಯ ಅಂತಿಮ ವಿಧಿ ವಿಧಾನಗಳು ಇಂದು ಉತ್ತರ ಪ್ರದೇಶದ ತರುಣಸಾಗರಂ ನಲ್ಲಿ ನಡೆಯಲಿದೆ. ಸದ್ಯ ಮುನಿಯವರ ಅಕಾಲಿಕ ನಿಧನಕ್ಕೆ ಕೇಂದ್ರ ಸಚಿವರು ಸೇರಿದಂತೆ ಗಣ್ಯರಿಂದ ಸಂತಾಪ ಸೂಚಿಸಿದ್ದಾರೆ.
Advertisement
1967 ರ ಜೂನ್ 26ರಂದು ಮಧ್ಯ ಪ್ರದೇಶದ ದಾಹೋಹ್ ಜಿಲ್ಲೆಯಲ್ಲಿ ಜನಿಸಿದ ಪವನ್ ಕುಮಾರ್ ಜೈನ್ 1981 ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ತಮ್ಮ ಭಾಷಣಗಳ ಮೂಲಕವೇ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Deeply pained by the untimely demise of Muni Tarun Sagar Ji Maharaj. We will always remember him for his rich ideals, compassion and contribution to society. His noble teachings will continue inspiring people. My thoughts are with the Jain community and his countless disciples. pic.twitter.com/lodXhHNpVK
— Narendra Modi (@narendramodi) September 1, 2018
ಜೈನ ಮುನಿ ತರುಣ್ ಸಾಗರ್ ಅವರ ನಿಧನದ ವಿಷಯ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಭಗವಂತನು ಅವರ ಅನುಯಾಯಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ. ಮುನಿಗಳ ವಿಚಾರಧಾರೆ, ಸಿದ್ಧಾಂತಗಳು ಇಡೀ ಸಮಾಜವನ್ನು ಸದಾ ಸನ್ಮಾರ್ಗದಲ್ಲಿ ನಡೆಸಲಿ. pic.twitter.com/AK48aB3m0J
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 1, 2018
Pained to learn about the death of Muni Tarun Sagarji Maharaj. He was a torchbearer of peace and his death is a huge loss for the Jain community and for all of us. My deepest condolences. pic.twitter.com/Yxss1iE7O2
— Dr. G Parameshwara (@DrParameshwara) September 1, 2018
Deepest condolences on the sad demise of Pujya Jain Muni Shri Tarun Sagar Ji Maharaj.
His spiritual wisdom will always be closer to our hearts and keep on guiding and enlightening our paths.
Om Shanti. #TarunSagarJiMaharaj #TarunSagar pic.twitter.com/lj1IDIVCAJ
— Pratap Simha (@mepratap) September 1, 2018
ಕ್ರಾಂತಿಕಾರಿ ಸಂತ ಮುನಿಶ್ರೀ ತರುಣ ಸಾಗರ ಜೀಯವರು ದೈವಾಧೀನರಾಗಿರುವುದು ಅತೀವ ದುಃಖ ತಂದಿದೆ. ಜೈನ ಸಂನ್ಯಾಸಿಯಾಗಿ ಅಧ್ಯಾತ್ಮ ಸೇವೆಯಲ್ಲಿ ನಿರತರಾಗಿದ್ದ ಅವರು ಪ್ರವಚನದ ಮೂಲಕ ಅಸಂಖ್ಯಾತ ಜನರಿಗೆ ಸನ್ಮಾರ್ಗ ತೋರಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/IfdlCBJJ80
— B.S.Yediyurappa (@BSYBJP) September 1, 2018
Saddened to learn about the untimely demise of Muni Tarun Sagar ji Maharaj. He had devoted his entire life for the welfare of the society. In him, we have lost a noble preacher of peace and humanity. My deepest condolences with his countless followers in this hour of grief.
— Amit Shah (@AmitShah) September 1, 2018