ಚಿಕ್ಕೋಡಿ: ಜೈನಮುನಿ (Jain Muni) ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮವಾರ) ಆರೋಪಿಗಳ 7 ದಿನಗಳ ಪೊಲೀಸ್ ಕಸ್ಟಡಿ (Police Custody) ಅಂತ್ಯವಾಗಲಿದೆ. ಇಂದು ಮತ್ತೆ ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ (Court) ಮುಂದೆ ಹಾಜರು ಪಡಿಸಲಿದ್ದಾರೆ.
ಈ 7 ದಿನಗಳಲ್ಲಿ ಆರೋಪಿಗಳಿಂದ ಪಿನ್ ಟು ಪಿನ್ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಪೊಲೀಸ್ ತನಿಖೆಯಲ್ಲಿ ಬಗೆದಷ್ಟು ರಹಸ್ಯ ಪತ್ತೆಯಾಗಿದ್ದು, ಚಿಕ್ಕೋಡಿ (Chikkodi) ಡಿವೈಎಸ್ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ತನಿಖೆ ನಡೆದಿದೆ. ಎ1 ಆರೋಪಿ ನಾರಾಯಣ ಮಾಳಿ ಹಾಗೂ ಎ2 ಆರೋಪಿ ಹಸನಸಾಬ್ ಡಾಲಾಯತ್‌ನನ್ನು ತೀವ್ರ ವಿಚಾರಣೆ ಮಾಡಲಾಗಿದೆ. ಪೊಲೀಸರ ಕೈಯಲ್ಲಿ ಸಿಕ್ಕಿಹಾಕಿಕೊಳ್ಳಬಾರದು ಎಂದು ಆರೋಪಿಗಳು ಹತ್ಯೆ ಮಾಡಿ ಬಂದು ತಮ್ಮ ಬಟ್ಟೆಗಳನ್ನೆಲ್ಲಾ ಸುಟ್ಟು ಹಾಕಿರುವ ರಹಸ್ಯವೊಂದು ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಕ್ಯಾಸಿನೋಗಾಗಿ ಕಳ್ಳತನ – ಮೂವರು ಆರೋಪಿಗಳು ಅರೆಸ್ಟ್
ಸಾಕ್ಷ್ಯ ನಾಶ ಮಾಡಲು ಖತರ್ನಾಕ್ ಐಡಿಯಾ ಮಾಡಿದ್ದ ಹಂತಕರು, ಸ್ವಾಮೀಜಿಯ ಹತ್ಯೆ ಮಾಡಿ ಮಧ್ಯರಾತ್ರಿ 3 ಗಂಟೆಗೆ ಹೀರೆಕೋಡಿ (Hirekodi) ಗ್ರಾಮಕ್ಕೆ ಬಂದಿದ್ದರು. ಚಿಕ್ಕೋಡಿ ತಾಲೂಕಿನ ಹೀರೆಕೋಡಿ ಗ್ರಾಮದಿಂದ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದವರೆಗೆ ಸ್ವಾಮೀಜಿಯ ಶವ ಸಾಗಿಸಿ ಬಳಿಕ ಅವರ ಮೃತದೇಹವನ್ನು ಪೀಸ್ ಪೀಸ್ ಮಾಡಿ ಕೊಳವೆ ಬಾವಿಗೆ ಎಸೆದಿದ್ದರು. ಇದನ್ನೂ ಓದಿ: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ದುರ್ಮರಣ
ನಂತರ ಎ1 ಆರೋಪಿ ನಾರಾಯಣ ಮಾಳಿ ಮನೆಗೆ ಬಂದು ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಎಲ್ಲಾ ಬಟ್ಟೆಗಳಿಗೆ ಬೆಂಕಿ ಹಾಕಿ ಸುಟ್ಟಿದ್ದಾನೆ. ಬಳಿಕ ಬೇರೆ ಬಟ್ಟೆ ತೊಟ್ಟು ಚಿಕ್ಕೋಡಿಯ ಎ2 ಆರೋಪಿ ಹಸನ್ ಡಾಲಾಯತ್ ಮನೆಗೆ ತೆರಳಿದ್ದ. ಸಾಕ್ಷಿ ನಾಶ ಮಾಡಿದ ಬಟ್ಟೆ ಹಾಗೂ ಡೈರಿಯ ಬೂದಿಯನ್ನು ಪೊಲೀಸರು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಪೋಲಿ ಹುಡುಗರ ಹಾವಳಿ- ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿ ಅಶ್ಲೀಲ ಬರಹ
ತಾವೇ ಕೊಂದು ಸ್ವಾಮೀಜಿ ಹುಡುಕಾಟದ ನಾಟಕವಾಡಲು ಹೋಗಿ ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಸಾಕ್ಷಿ ನಾಶ ಮಾಡಿದ ಕುರಿತು ಮಾಹಿತಿ ಸಂಗ್ರಹಿಸಿ ಪುರಾವೆಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ತನಿಖೆ ವೇಳೆ ಕೊಲೆ ಮಾಡಿದ್ದ ಕುಡಗೋಲು ಕಾಲುವೆಯಲ್ಲಿ ಪತ್ತೆಯಾಗಿದ್ದು, ಎಲ್ಲಾ ದಾಖಲೆಗಳನ್ನು ವಶಕ್ಕೆ ಪಡೆದು ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಲು ಪೊಲೀಸರು ಸಾಕ್ಷಿ ಸಂಗ್ರಹ ಮಾಡಿದ್ದಾರೆ. ಇದನ್ನೂ ಓದಿ: 15 ಸಾವಿರಕ್ಕಾಗಿ ಭಾರತೀಯ ಸೇನೆ ರಹಸ್ಯ ಮಾಹಿತಿಯನ್ನ ಪಾಕಿಸ್ತಾನಕ್ಕೆ ಕೊಡ್ತಿದ್ದ ವ್ಯಕ್ತಿ ಅರೆಸ್ಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]