ಜೈಪುರ: ಸ್ಥಳೀಯ ಬಿಜೆಪಿ ನಾಯಕನ ಮಗ ಮದ್ಯದ ನಶೆಯಲ್ಲಿ ಕಾರು ಓಡಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜಸ್ಥಾನದ ಗಾಂಧಿನಗರದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ಶುಕ್ರವಾರ ರಾತ್ರಿ ಸ್ಥಳೀಯ ಬಿಜೆಪಿ ನಾಯಕನ ಮಗ ಭರತ್ ಭೂಷಣ್ ಮೀನಾ ಈ ಕೃತ್ಯ ಎಸಗಿದ್ದು, ಪೊಲೀಸರು ಈಗ ಆತನನ್ನು ಬಂಧಿಸಿದ್ದಾರೆ. ಫ್ಲೈ ಓವರ್ ಕೆಳಗಿನ ರಸ್ತೆಯ ಬದಿಯಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಕಾರು ಓಡಿಸಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಭರತ್‍ನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಆತನ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಗಾಯಗೊಂಡ ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಎಸ್‍ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತ್ ಭೂಷಣ್ ತಂದೆ ಬದ್ರಿ ನಾರಾಯಣ್ ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡರಾಗಿದ್ದು ಅವರ ಹೆಸರಲ್ಲಿ ಎಸ್‍ಯುವಿ ಕಾರು ನೊಂದಣಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv