ಈ ವಿಡಿಯೋ ರಿಲೀಸ್ ಆಗೋ ವೇಳೆ ನಾನು ಸ್ವರ್ಗದಲ್ಲಿ ಇರ್ತೀನಿ: ನರಹಂತಕ ಉಗ್ರ

Public TV
1 Min Read
adil jaish terrorist.jpeg

ಪುಲ್ವಾಮ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಹೊಣೆಯನ್ನು ನಿಷೇಧಿತ ಜೈಶ್-ಇ-ಮೊಹಮದ್ ಸಂಘಟನೆ ಹೊತ್ತುಕೊಂಡಿದ್ದು, ಈ ಸಂಬಂಧ ವಿಡಿಯೋವನ್ನು ಹರಿಬಿಟ್ಟಿದೆ. ಆತ್ಮಾಹುತಿ ದಾಳಿಯನ್ನು ಆದಿಲ್ ಅಹ್ಮದ್ ದಾರ್ ನಡೆಸಿದ್ದು, ತನ್ನ ಕೃತ್ಯದ ಬಗ್ಗೆ ನರಹಂತಕ ಉಗ್ರ ವಿಡಿಯೋದಲ್ಲಿ ಕೊಚ್ಚಿಕೊಂಡಿದ್ದಾನೆ

ಕಾಶ್ಮೀರದ ಪುಲ್ವಾಮ ದಾಳಿ ಬಳಿಕ ಜೈಶ್-ಇ-ಮೊಹಮದ್ ಸಂಘಟನೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದೆ. ದಾಳಿ ನಡೆಸುವ ಮುನ್ನವೇ ಆದಿಲ್ ದಾರ್, ಸಂಘಟನೆಯ ಧ್ವಜದ ಮುಂದೆ ಶಸ್ತ್ರಸಜ್ಜಿತನಾಗಿ ನಿಂತು ತಾನು ಮಾಡಲು ಹೊರಟ ಕೃತ್ಯದ ಬಗ್ಗೆ ಮಾತನಾಡಿದ್ದಾನೆ. ಈ ವಿಡಿಯೋದಲ್ಲಿ ತನ್ನ ಬೆಂಬಲಿಸುವಂತೆ ಕಾಶ್ಮೀರಿ ಮುಸ್ಲಿಮರಲ್ಲಿಯೂ ಆತ ಮನವಿ ಮಾಡಿಕೊಂಡಿದ್ದು, ಈ ವಿಡಿಯೋ ಬಿಡುಗಡೆ ಆಗುವ ವೇಳೆ ನಾನು ಸ್ವರ್ಗದಲ್ಲಿರುತ್ತೇನೆ ಎಂದು ಆದೀಲ್ ದಾರ್ ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಕಾರು ಡಿಕ್ಕಿ ಹೊಡೆದ ನಂತ್ರ ಗುಂಡಿನ ದಾಳಿ: 2,547 ಸೈನಿಕರು ಟಾರ್ಗೆಟ್, 100 ಮೀಟರ್ ದೂರಕ್ಕೆ ಹಾರಿತು ದೇಹ!

car attack 2

ಜಮ್ಮು-ಶ್ರೀನಗರದ ಹೆದ್ದಾರಿಯಲ್ಲಿಯ ಸಿಆರ್‍ಪಿಎಫ್ ಯೋಧರ 72ಕ್ಕೂ ಅಧಿಕ ವಾಹನಗಳನ್ನು ಸ್ಫೋಟಿಸುವ ಗುರಿಯನ್ನು ಸಂಘಟನೆ ಆದಿಲ್ ನಿಗೆ ನೀಡಿತ್ತು. ಪ್ರತಿಯೊಂದು ವಾಹನದಲ್ಲಿ ಸುಮಾರು 40ರಿಂದ 45 ಭಾರತೀಯ ಸೈನಿಕರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿಯನ್ನು ಉಗ್ರರು ಪಡೆದುಕೊಂಡಿದ್ದರು.

2016 ಸೆಪ್ಟೆಂಬರ್ ನಲ್ಲಿ ನಡೆದ ಉರಿ ದಾಳಿಯಲ್ಲಿ 19 ಯೋಧರು ಹುತಾತ್ಮರಾಗಿದ್ದರು. ಉರಿ ದಾಳಿಗೆ ಪ್ರತೀಕರವಾಗಿ ಭಾರತೀಯ ಸೇನಾ ಪಡೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ನೆಲೆಯನ್ನು ಧ್ವಂಸಗೊಳಿಸಿತ್ತು.

https://www.youtube.com/watch?v=iKU4BcVVdnE

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *