ಇಸ್ಲಾಮಾಬಾದ್: ಭಾರತದ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯ ವೈಮಾನಿಕ ದಾಳಿಗೆ ತುತ್ತಾದ ತಿಂಗಳುಗಳ ನಂತರ ಭಯೋತ್ಪಾದಕ ಸಂಘಟನೆ ಜೈ-ಎ-ಮೊಹಮ್ಮದ್ (Jaish-e-Mohammed) ತಮ್ಮ ಪ್ರಧಾನ ಕಚೇರಿ ಪುನರ್ ನಿರ್ಮಿಸಲು ನಿಧಿಗೆ ಮನವಿ ಮಾಡಿಕೊಂಡಿದೆ.
2001 ರ ಸಂಸತ್ತಿನ ಮೇಲೆ ನಡೆದ ದಾಳಿ ಮತ್ತು 2019 ರ ಪುಲ್ವಾಮಾ ಆತ್ಮಾಹುತಿ ಬಾಂಬ್ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ಹಲವಾರು ಪ್ರಮುಖ ದಾಳಿಗಳಿಗೆ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಹೊಣೆಗಾರಿಕೆಯಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನದ ಬಹವಾಲ್ಪುರದಲ್ಲಿರುವ ಜೈಶ್‌ನ ಪ್ರಧಾನ ಕಚೇರಿಯು ವೈಮಾನಿಕ ದಾಳಿಯಿಂದ ನಾಶವಾಗಿದೆ. ಇದನ್ನೂ ಓದಿ: ಭಾರತ ಕೊಟ್ಟ ತಿರುಗೇಟಿಗೆ ಸರಿಯಾಗಿ ಉತ್ತರ ನೀಡದೇ ನುಣುಚಿದ ಟ್ರಂಪ್
ಸುಮಾರು ಮೂರು ತಿಂಗಳ ನಂತರ ಮೌಲಾನಾ ಮಸೂದ್ ಅಜರ್ ನೇತೃತ್ವದ ಸಂಘಟನೆಯು, ನಾಶವಾಗಿರುವ ಸ್ಥಳವನ್ನು ಪುನರ್ ನಿರ್ಮಿಸಲು ನಿಧಿಯನ್ನು ಸಂಗ್ರಹಿಸುವ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾನೆ.
ಪಾಕಿಸ್ತಾನದ ದಕ್ಷಿಣ ಪಂಜಾಬ್ ಪ್ರಾಂತ್ಯದ ಒಳಗೆ ಸುಮಾರು 100 ಕಿ.ಮೀ ದೂರದಲ್ಲಿರುವ ಬಹವಾಲ್ಪುರ್, ಬಹಳ ಹಿಂದಿನಿಂದಲೂ ಭಯೋತ್ಪಾದಕ ಗುಂಪಿನ ಸೈದ್ಧಾಂತಿಕ ಮತ್ತು ಕಾರ್ಯಾಚರಣೆಯ ಕೇಂದ್ರವಾಗಿದೆ. ಇದನ್ನೂ ಓದಿ: ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ
ಜೆಇಎಂ ತನ್ನ ಪ್ರಧಾನ ಕಚೇರಿಯಾದ ಜಾಮಿಯಾ ಮಸೀದಿ ಸುಭಾನ್ ಅಲ್ಲಾಹ್‌ನ ಪುನರುಜ್ಜೀವನಕ್ಕಾಗಿ ದೇಣಿಗೆ ಕೋರಿದೆ. ಇದು ಒಂದು ಕಾಲದಲ್ಲಿ ವಿಸ್ತಾರವಾದ ಕಾಂಪ್ಲೆಕ್ಸ್ ಆಗಿತ್ತು. ಅಜರ್, ಅವನ ಸಹೋದರ, ಮುಖ್ಯಸ್ಥ ಮುಫ್ತಿ ಅಬ್ದುಲ್ ರೌಫ್ ಅಸ್ಗರ್ ಮತ್ತು ಇತರ ಕುಟುಂಬ ಸದಸ್ಯರಿಗೆ ನೆಲೆಯಾಗಿತ್ತು. ಬುಧವಾರ ಪ್ರಾರಂಭವಾದ ಅಭಿಯಾನದ ಯಶಸ್ಸಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದೆ.
2015 ರಲ್ಲಿ ಸ್ಥಾಪನೆಯಾದಾಗಿನಿಂದ, ಜಾಮಿಯಾ ಮಸೀದಿ ಸುಭಾನ್ ಅಲ್ಲಾ ಜೆಇಎಂನ ಪ್ರಾಥಮಿಕ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರ ಕಾರ್ಯಾಚರಣಾ ಪ್ರಧಾನ ಕಚೇರಿ ಮತ್ತು ಪ್ರಮುಖ ತರಬೇತಿ ಸೌಲಭ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಬಹವಾಲ್ಪುರ್ ಪ್ರಮುಖ ಗುರಿಗಳಲ್ಲಿ ಒಂದಾಗಿತ್ತು. ನಿಖರವಾದ ದಾಳಿಗಳಿಂದ ಕಟ್ಟಡಕ್ಕೆ ವ್ಯಾಪಕ ಹಾನಿಯನ್ನುಂಟಾಗಿತ್ತು.
ಜೆಇಎಂ ಮುಖ್ಯಸ್ಥ ತನ್ನ ಕುಟುಂಬದ 10 ಸದಸ್ಯರು ಮತ್ತು ತನ್ನ ನಾಲ್ವರು ಸಹಾಯಕರು ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಾನೆ. 1994 ರಲ್ಲಿ ಭಾರತದಲ್ಲಿ ಬಂಧಿಸಲ್ಪಟ್ಟು ಏರ್ ಇಂಡಿಯಾ ಐಸಿ 814 ವಿಮಾನ ಅಪಹರಣದ ನಂತರ ಬಿಡುಗಡೆಯಾದ ಅಜರ್ ಹೇಳಿಕೆಯ ಪ್ರಕಾರ, ದಾಳಿಯಲ್ಲಿ ಸಾವನ್ನಪ್ಪಿದವರು ಆತನ ಅಕ್ಕ, ಆಕೆಯ ಪತಿ, ಸೋದರಳಿಯ ಮತ್ತು ಪತ್ನಿ, ಸೊಸೆ ಮತ್ತು ಕುಟುಂಬದ ಐದು ಮಕ್ಕಳು ಎನ್ನಲಾಗಿದೆ.