ನವದೆಹಲಿ: ದಿಢೀರ್ ಬೆಳವಣಿಗೆ ಎಂಬಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ಅವರು ರಾಜೀನಾಮೆ ನೀಡಿದ್ದಾರೆ.
Congress leader Jaiveer Shergill resigns from the post of National Spokesman of the Congress party. pic.twitter.com/NjIP0GlQjS
— ANI (@ANI) August 24, 2022
Advertisement
ತಮ್ಮ ರಾಜೀನಾಮೆ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಉನ್ನತ ನಾಯಕರು ತಮ್ಮ ಸಿದ್ಧಾಂತಕ್ಕಾಗಿ ಹೋರಾಡುವುದಕ್ಕಿಂತ ವಿದೇಶ ಪ್ರವಾಸದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಪಕ್ಷಕ್ಕಾಗಿ ನಾವು ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಕ್ಷದ ನಿರ್ಧಾರವು ಸ್ವಯಂ ಸೇವಾ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ಇದು ನನಗೆ ತುಂಬಾ ನೋವುಂಟು ಮಾಡಿದೆ ಎಂದಿದ್ದಾರೆ.
Advertisement
Advertisement
ವರದಿಗಳ ಪ್ರಕಾರ, ಕಳೆದ ಕೆಲ ತಿಂಗಳುಗಳಿಂದ ಜೈವೀರ್ ಅವರಿಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನೀಡುತ್ತಿರಲಿಲ್ಲ. ಕಾಂಗ್ರೆಸ್ ಹಿರಿಯರಾದ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಅವರು ಪಕ್ಷದಲ್ಲಿ ತಮಗೆ ವಹಿಸಲಾಗಿದ್ದ ಪಾತ್ರಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಪಕ್ಷದಲ್ಲಿ ಈ ಬೆಳವಣಿಗೆಗಳಾಗಿವೆ ಎನ್ನಲಾಗಿದೆ. ಇದನ್ನೂ ಓದಿ: ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Advertisement
"It pains me to say that decision-making is no longer for interests of public & country,rather it's influenced by the self-serving interests of individuals indulging in sycophancy & consistently ignoring on-ground reality", wrote Shergill in his resignation letter to Sonia Gandhi pic.twitter.com/EHRODA5PoR
— ANI (@ANI) August 24, 2022
ಮೂರು ದಿನಗಳ ಹಿಂದೆಯಷ್ಟೇ ಹಿರಿಯ ನಾಯಕ ಆನಂದ್ ಶರ್ಮಾ ಹಿಮಾಚಲ ಪ್ರದೇಶದ ಕಾಂಗ್ರೆಸ್‍ನ ಸ್ಟೀರಿಂಗ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.