ಹೈದರಾಬಾದ್: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಭಾಗವಹಿಸಿದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Advertisement
ಜನವರಿ 16 ರಂದು ಭಾನುವಾರ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 30 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಲಾಕ್‍ಡೌನ್ ಬೇಡ- ಸರ್ಕಾರಕ್ಕೆ ಪ್ರತಾಪ್ ಸಿಂಹ ಒತ್ತಾಯ
Advertisement
ಈ ಕ್ರೀಡೆಯಲ್ಲಿ ಭಾಗವಹಿಸಲು ನೆರೆಯ ನೆಲ್ಲೂರು, ಕಡಪ ಜಿಲ್ಲೆಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಅಲ್ಲದೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ, 500 ಕ್ಕೂ ಹೆಚ್ಚು ಹೋರಿಗಳು ಮತ್ತು ನೂರಾರು ಗ್ರಾಮಸ್ಥರು ಇದರಲ್ಲಿ ಪಾಲ್ಗೊಂಡಿದ್ದರು.
Advertisement
Advertisement
(ಟಿಡಿಪಿ) ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಪ್ರತಿನಿಧಿಸುವ ಕುಪ್ಪಂ ವಿಧಾನಸಭಾ ಕ್ಷೇತ್ರದ ಗುಂಡುಪಲ್ಲಿ ಮಂಡಲದ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದನ್ನೂ ಓದಿ: Happy Birthday To My Love – ಬಾಲಿವುಡ್ ನಟನಿಗೆ ಸುದೀಪ್ ಪುತ್ರಿ ವಿಶ್