ಚೆನ್ನೈ: ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 300 ಗೂಳಿಗಳನ್ನು ಬೆದರಿಸಲು ಅಖಾಡಕ್ಕೆ ಬಿಡಲಾಗಿತ್ತು. ಈ ವೇಳೆ 46 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಗೂಳಿಗಳನ್ನು ಪಳಗಿಸುವ ಪ್ರಯತ್ನದಲ್ಲಿ ಅನೇಕ ಮಂದಿ ವಿಫಲರಾದರು. ಈ ಸ್ಪರ್ಧೆಯಲ್ಲಿ 46 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ನಿಯಮ ಪಾಲನೆಯೊಂದಿಗೆ ಜಲ್ಲಿಕಟ್ಟು ಸ್ಪರ್ಧೆ ನಡೆಸಲು ಸರ್ಕಾರ ನಿರ್ಧರಿಸಿದ ನಂತರ ಸುಮಾರು 4,544 ಗೂಳಿಗಳ ಮಾಲೀಕರು ಹಾಗೂ 2001 ಗೂಳಿ ಪಳಗಿಸುವವರು ಸ್ಪರ್ಧೆಗಾಗಿ ಆನ್ ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಇದನ್ನೂ ಓದಿ: ಗೂಳಿಗಳ ಗುದ್ದಿಗೆ ಸೈಲೆಂಟ್ ಆದ ಗುಜರಾತ್ ಜೈಂಟ್ಸ್
Advertisement
#WATCH Jallikattu competition in Avaniyapuram area of Madurai, Tamil Nadu
As many as 48 persons have sustained injuries in this event, as per a health official pic.twitter.com/ZqFRCC3GKd
— ANI (@ANI) January 14, 2022
Advertisement
ಪ್ರತಿ ವರ್ಷ ಪೊಂಗಲ್ ಸಂದರ್ಭದಲ್ಲಿ ತಮಿಳುನಾಡಿನ ಹಳ್ಳಿಗಳಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಕೊರೊನಾ ಸೋಂಕಿನಿಂದಾಗಿ ಈ ಬಾರಿ ವಿಶೇಷ ಅತಿಥಿ ಪಾಲ್ಗೊಂಡಿರಲಿಲ್ಲ. ಜಲ್ಲಿಕಟ್ಟು ಸ್ಪರ್ಧೆ ಆಯೋಜಕರು ಚಿನ್ನದ ನಾಣ್ಯ, ವಾಷಿಂಗ್ ಮೆಷಿನ್, ಕಾರು, ಬೈಕ್ ಮತ್ತಿತರ ಕೊಡುಗೆಗಳನ್ನು ಘೋಷಿಸುತ್ತಾರೆ. ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಕೊರೊನಾ ಮಾರ್ಗಸೂಚಿ ಜಾರಿಗೊಳಿಸಿದ ತಮಿಳುನಾಡು ಸರ್ಕಾರ
Advertisement
#Omicron: Tamil Nadu Govt issues SOP for Jallikattu events, allows only 150 spectators or 50% of seating capacity (whichever is less)
Full vaccination or negative RT-PCR test report not older than 48 hours a must
(File photo) pic.twitter.com/vZip5GIdzY
— ANI (@ANI) January 10, 2022
Advertisement
ತಮಿಳುನಾಡಿನ ಜನತೆಗೆ ಬಹು ದೊಡ್ಡ ಹಬ್ಬ ಅಂದರೆ ಪೊಂಗಲ್. ವರ್ಷದ ಆರಂಭದಲ್ಲಿ ಬರುವ ಪೊಂಗಲ್ ಹಬ್ಬದ ವೇಳೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಏರ್ಪಡಿಸಲಾಗುತ್ತದೆ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣ ಜಲ್ಲಿಕಟ್ಟು ಕ್ರೀಡೆಯನ್ನು ನಿಲ್ಲಿಸಲಾಗಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ಮತ್ತೆ ಜಲ್ಲಿಕಟ್ಟು ಕ್ರೀಡಾಕೂಟವನ್ನು ಆಯೋಜಿಸಿರುವ ಸರ್ಕಾರ ಕೊರೊನಾ ನಿಯಮಗಳನ್ನು ಜಾರಿಗೊಳಿಸಿದ್ದು, ಗೂಳಿ ಪಳಗಿಸುವವರು ಸೇರಿ 300 ಜನ ಮಾತ್ರ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ಗೂಳಿ ಪಳಗಿಸುವ 150 ಮಂದಿ 48 ಗಂಟೆಗಳೊಳಗೆ ಕೊರೊನಾ ನೆಗಟಿವ್ ವರದಿ ಸಲ್ಲಿಸಬೇಕು ಮತ್ತು ಜಲ್ಲಿಕಟ್ಟು ಕ್ರೀಡೆಯನ್ನು ವೀಕ್ಷಿಸಲು 150 ಮಂದಿ ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದ್ದು, ಅಲ್ಲರಿಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಖಡ್ಡಾಯ ಎಂದು ಸರ್ಕಾರ ಸೂಚನೆ ನೀಡಿತ್ತು.