ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಜಲ್ಲಿಕಟ್ಟು (Jallikattu) ಸ್ಪರ್ಧೆಯ ಸೀಸನ್ ಆರಂಭಗೊಂಡಿದೆ. ಪುದುಕ್ಕೂಟ್ಟೈನಲ್ಲಿ (Pudukkottai) ಆರಂಭಗೊಂಡ ಈ ವರ್ಷದ ಮೊದಲ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪೊಲೀಸರು ಸೇರಿದಂತೆ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Advertisement
ತಮಿಳುನಾಡಿನ ಜನತೆಗೆ ಬಹು ದೊಡ್ಡ ಹಬ್ಬ ಅಂದರೆ ಪೊಂಗಲ್. ವರ್ಷದ ಆರಂಭದಲ್ಲಿ ಬರುವ ಪೊಂಗಲ್ ಹಬ್ಬದ ವೇಳೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಏರ್ಪಡಿಸಲಾಗುತ್ತದೆ. ಈ ಬಾರಿ ವರ್ಷದ ಮೊದಲ ಜಲ್ಲಿಕಟ್ಟು ಸ್ಪರ್ಧೆ ಪುದುಕ್ಕೂಟ್ಟೈನ ತಚ್ಚಂಕುರಿಚಿಯಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಸ್ಪರ್ಧೆ ವೀಕ್ಷಿಸಲು ಬಂದವರು, ಸ್ಫರ್ಧಿಗಳು ಮತ್ತು ಪೊಲೀಸರು ಸೇರಿದಂತೆ ಈವರೆಗೆ 35ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಹೋರಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಜನ ಕೂಡ ಕಿಕ್ಕಿರಿದು ತುಂಬಿಕೊಂಡು ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆ ವೀಕ್ಷಿಸಿದರು. ಇದನ್ನೂ ಓದಿ: ಕೊಳದಲ್ಲಿ ಸ್ನಾನ ಮಾಡ್ತಿದ್ದ ಮಹಿಳೆ ವಿರುದ್ಧ DMK ಸದಸ್ಯನಿಂದ ಜಾತಿ ನಿಂದನೆ
Advertisement
Advertisement
ಹೋರಿಯನ್ನು ಪಳಗಿಸುವ ಸ್ಪರ್ಧೆಯ ವಿಜೇತರಿಗೆ ಬೈಕ್, ಕುಕ್ಕರ್ ಸಹಿತ ಹಲವು ಪ್ರಶಸ್ತಿಗಳನ್ನು ನೀಡಲಾಯಿತು. ಈ ಬಾರಿ ವಿಶೇಷವಾಗಿ ಸೂಕ್ತ ಭದ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಸ್ಪರ್ಧೆಯನ್ನು ಏರ್ಪಡಿಸಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಟಿಪ್ಪು ನಿಜಕನಸುಗಳು ಮಾದರಿಯಲ್ಲಿ ಸಿದ್ದು ನಿಜಕನಸುಗಳು ಪುಸ್ತಕ ಇಂದು ಬಿಡುಗಡೆ
Advertisement
ತಮಿಳುನಾಡಿನ ದೇಸಿ ಕ್ರೀಡೆಯಾದ ಜಲ್ಲಿಕಟ್ಟು ಕ್ರೀಡೆಯನ್ನು ಪ್ರಾಣಿಹಿಂಸೆ ಕಾರಣದಿಂದ ಸುಪ್ರೀಂ ಕೋರ್ಟ್ ನಿಷೇಧ ಹೇರಿತ್ತು. ಆ ಬಳಿಕ ತಮಿಳುನಾಡು ಸರ್ಕಾರದ ಕಾನೂನು ಹೋರಾಟದ ಬಳಿಕ ಇದೀಗ ಮತ್ತೆ ಜಲ್ಲಿಕಟ್ಟು ಕ್ರೀಡೆ ತಮಿಳುನಾಡಿನಲ್ಲಿ ನಡೆಯುತ್ತಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k