Connect with us

Crime

ದಟ್ಟ ಮಂಜಿನಿಂದ ರಸ್ತೆ ಕಾಣದೇ ಅಪಘಾತ, 14 ಸಾವು – ಮೋದಿ ಸಂತಾಪ

Published

on

  -ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ಪರಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಮತ್ತು ಗಾಯಾಳುಗಳ ಕುಟುಂಬಕ್ಕೆ ಪ್ರಧಾನಿ ನರೆಂದ್ರ ಮೋದಿ ಅವರು 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಬೇಗವಾಸಿಯಾಗಲಿ, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ ಮೃತರ ರಕ್ತಸಂಬಂಧಿಗಳಿಗೆ ತಲಾ 2 ಲಕ್ಷ ರೂಪಾಯಿ, ಪ್ರಧಾನಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಗಾಯಾಳುಗಳಿಗೆ 50,000 ರೂಪಾಯಿ ಹಣವನ್ನು ಪರಿಹಾರವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.

ದಟ್ಟವಾದ ಮಂಜು ಆವರಿಸಿದ ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ ವಾಹನವೊಂದು ಅಪಘಾತಕ್ಕೀಡಾಗಿತ್ತು. ಈ ವೇಳೆ 14 ಮಂದಿ ಧಾರುಣವಾಗಿ ಮೃತಪಟ್ಟಿದ್ದಾರೆ ಹಾಗೂ 18 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕಲ್ಲು ಬಂಡೆಯನ್ನು ತುಂಬಿದ್ದ ಟ್ರಕ್ ಮತ್ತೊಂದು ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ರಾಂಗ್ ರೂಟ್‍ನಲ್ಲಿ ಬರುತ್ತಿದ್ದ ಇತರ ಎರಡು ವಾಹನಗಳು ಟ್ರಕ್‍ಗೆ ಡಿಕ್ಕಿ ಹೊಡೆದಿದ್ದು, ಇದರಿಂದಾಗಿ ಟ್ರಕ್‍ನಲ್ಲಿ ತುಂಬಿದ ಬಂಡೆಗಳು ವಾಹನದ ಮೇಲೆ ಬಿದ್ದವು. ಟ್ರಕ್‍ನ ಮುಂಭಾಗದಲ್ಲಿದ್ದ ಮತ್ತೊಂದು ಸಣ್ಣ ಲಾರಿ ಕೂಡ ಹಾನಿಯಾಗಿದೆ. ಒಟ್ಟಾರೆಯಾಗಿ ಈ ಅಪಘಾತದಲ್ಲಿ ನಾಲ್ಕು ವಾಹನಗಳು ಹಾನಿಗೊಳಗಾಗಿವೆ.

ಈ ಅಪಘಾತದಲ್ಲಿ ಟ್ರಕ್ ಚಾಲಕ ಬದುಕುಳಿದಿದ್ದಾನೆ. ಆತನನ್ನು ಬಂಧಿಸಿದ್ದೇವೆ ವಿಚಾರಣೆ ನಡೆಸುತ್ತೇವೆ. ಅಪಘಾತಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದು ಜಲ್ಪೈಗುರಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸುಮಂತ್ ರಾಯ್ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *