ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ವಿಜಯದಶಮಿಯಂದು ನಡೆಯುವ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ಅರ್ಜುನ ಬನ್ನಿ ಮಂಟಪದತ್ತ ಹೆಜ್ಜೆ ಹಾಕುತ್ತಿದ್ದಾನೆ.
ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಶುಭ ಕುಂಭ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.14ರ ಸಮಯದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
Advertisement
Advertisement
ಜಂಬೂ ಸವಾರಿಯಲ್ಲಿ 7 ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗುತ್ತಿದ್ದಾನೆ. ಅರ್ಜುನನಿಗೆ ಕಾವೇರಿ ಮತ್ತು ವರಲಕ್ಷ್ಮಿ ಆನೆಗಳು ಸಾಥ್ ನೀಡಿವೆ. ನಿಶಾನೆ ಮತ್ತು ನೌಪತ್ ಆನೆಗಳಾಗಿ ಅಭಿಮನ್ಯು, ಬಲರಾಮ, ಕ್ರಮ, ದ್ರೋಣ, ಕಾವೇರಿ, ವಿಜಯ, ಚೈತ್ರ, ಗೋಪಿ ಪ್ರಶಾಂತ, ನಂಜಯ ಆನೆಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿವೆ.
Advertisement
ಈ ಜಂಬೂಸವಾರಿಯಲ್ಲಿ 42 ಸ್ತಬ್ಧ ಚಿತ್ರಗಳು, 40 ವಿವಿಧ ಜಾನಪದ ಕಲಾತಂಡಗಳು, 10 ವಿಶೇಷ ಕಲಾ ತಂಡ, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1, 675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದಾರೆ.
Advertisement
ಖಾಕಿ ಕಣ್ಣು:
ಅರಮನೆ ಹಾಗೂ ಜಂಬೂ ಸವಾರಿ ಮೆರವಣಿಗೆ 70 ಮಂದಿ ಕಮಾಂಡೋಗಳ ನಿಯೋಜನೆ ಮಾಡಲಾಗಿದ್ದು, ಮೆರವಣಿಗೆ ಮಾರ್ಗದಲ್ಲಿ 86 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 11 ಎಸ್‍ಪಿ, ಡಿಸಿಪಿ, 43 ಎಸಿಪಿ, 131 ಪೊಲೀಸ್ ಇನ್ಸ್ ಪೆಕ್ಟರ್, 328 ಸಬ್ ಇನ್ಸ್ ಪೆಕ್ಟರ್, 521 ಸಹಾಯಕ ಸಬ್ ಇನ್ಸ್ ಪೆಕ್ಟರ್, 304 ಮಹಿಳಾ ಪೊಲೀಸರು, 1,600 ಹೋಂ ಗಾರ್ಡ್, 3,944 ಮಂದಿ ಪೊಲೀಸ್ ಪೇದೆಗಳನ್ನು ನಿಯೋಜನೆ ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv