ಇನ್ನೆರಡು ದಿನಗಳು ಕಳೆದರೆ, ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲೇ 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಜಗತ್ತಿನ ವಿವಿಧ ದೇಶಗಳಲ್ಲೂ ಸಿನಿಮಾ ಪ್ರದರ್ಶನಕ್ಕೆ ಏರ್ಪಾಟು ಮಾಡಲಾಗಿದೆ. ಆಸ್ಟ್ರೇಲಿಯಾವೊಂದರಲ್ಲಿ 150ಕ್ಕೂ ಹೆಚ್ಚಿನ ಶೋಗಳು ನಡೆಯುತ್ತಿರುವುದು ಮತ್ತೊಂದು ವಿಶೇಷ.
Advertisement
ಆಸ್ಟ್ರೇಲಿಯಾದಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿರುವುದರಿಂದ ಅಲ್ಲಿಯೂ ಸಿನಿಮಾವನ್ನು ಸೆನ್ಸಾರ್ ಮಾಡಲಾಗಿದೆ. ಹಾಗಾಗಿ ಆ ದೇಶದಲ್ಲಿ ಸೆನ್ಸಾರ್ ಆದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಜೇಮ್ಸ್ ಪಾತ್ರವಾಗಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್
Advertisement
Advertisement
ಯು.ಎಸ್ ನಲ್ಲೂ ಜೇಮ್ಸ್ ಸಿನಿಮಾವನ್ನು ಬರಮಾಡಿಕೊಳ್ಳಲು 25ಕ್ಕೂ ಹೆಚ್ಚು ಸೇಟ್ಸ್ ರೆಡಿಯಾಗಿವೆಯಂತೆ. ವಾರಂತ್ಯಕ್ಕೆ ಈ ಶೋಗಳ ಸಂಖ್ಯೆಯೂ ಹೆಚ್ಚಾಗಲಿ ಎಂದಿದ್ದಾರೆ ಚಿತ್ರದ ನಿರ್ದೇಶಕ ಚೇತನ್ ಕುಮಾರ್. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದಕ್ಕೆ ಭಾರೀ ರೆಸ್ಪಾನ್ಸ್ ಸಿಗುತ್ತಿದೆಯಂತೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!
Advertisement
ಈಗಾಗಲೇ ಜೇಮ್ಸ್ ಸಿನಿಮಾಗಾಗಿ ರಾಜ್ಯದಲ್ಲಿ ಅನೇಕ ತಯಾರಿ ಮಾಡಿಕೊಳ್ಳಲಾಗಿದೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ವಾರದಿಂದಲೇ ಸಿದ್ಧತೆ ಮಾಡಿಕೊಂಡಿದ್ದಾರೆ. ಬಹುತೇಕ ಚಿತ್ರಮಂದಿರಗಳಲ್ಲಿ ಪುನೀತ್ ಅವರ ಕಟೌಟ್ ಹಾಕಲಾಗಿದೆ.