ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚತ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್ ದಾಳಿಯಲ್ಲಿ ಉಗ್ರನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಅಧಿಕೃತವಾಗಿ ಟ್ವೀಟ್ ಮಾಡಿದ್ದು, ಪುಲ್ವಾಮಾದ ಚತ್ಪೋರಾ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಜೊತೆಗೆ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಭಾಗಿಯಾಗಿದ್ದರು.
Advertisement
#KupwaraEncounterUpdate: 02 more #terrorists including #terrorist Showkat got #neutralised (total 04). #Incriminating materials, arms & ammunition recovered. Search going on. Further details shall follow.@JmuKmrPolice https://t.co/uI25QVRlJY
— Kashmir Zone Police (@KashmirPolice) June 20, 2022
ಭಾನುವಾರ ನಡೆದ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಡೆದ ಎನ್‍ಕೌಂಟರ್‌ನಲ್ಲಿ ಭದ್ರತಾ ಪಡೆ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ(ಎಲ್‍ಇಟಿ)ನ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದು, ಮೂವರನ್ನು ಬಂಧಿಸಿತ್ತು. ಇದನ್ನೂ ಓದಿ: ಪಾಕಿಸ್ತಾನಿ ಎಲ್‍ಇಟಿ ಉಗ್ರ ಎನ್‍ಕೌಂಟರ್ – ಮೂವರು ಅರೆಸ್ಟ್
Advertisement
#PulwamaEncounterUpdate: 01 #terrorist killed. Search going on. Further details shall follow.@JmuKmrPolice https://t.co/SSxiSewUEk
— Kashmir Zone Police (@KashmirPolice) June 19, 2022
ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದು, ಎನ್‍ಕೌಂಟರ್‌ನಲ್ಲಿ ಹಂತನಾದ ಭಯೋತ್ಪಾದಕನನ್ನು ಪಾಕಿಸ್ತಾನಿಯವನು ಗುರುತಿಸಲಾಗಿದೆ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‍ಇಟಿಯೊಂದಿಗೆ ಸಂಪರ್ಕ ಹೊಂದಿದ್ದ. ಬಂಧಿತ ಭಯೋತ್ಪಾದಕರ ಜೊತೆಗೆ ಇನ್ನೂ 2 ರಿಂದ 3 ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಮಳೆಯಿಂದ ರಸ್ತೆಯೆಲ್ಲಾ ಜಲಾವೃತ – ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪೊಲೀಸ್ ಹಾಗೂ ಪತ್ನಿ ಡ್ರೈನೇಜ್ ಗುಂಡಿಗೆ