ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪೊಲೀಸರು (Jammu Kashmir Police) & ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಸರಿಸುಮಾರು 4 ಕೆಜಿಯಷ್ಟು ಐಇಡಿ (ಸುಧಾರಿತ ಸ್ಫೋಟಕ ಸಾಧನ) ನಿಷ್ಕ್ರಿಯಗೊಳಿಸಿದ್ದು, ಭಯೋತ್ಪಾದಕರ ಸಂಚನ್ನು ವಿಫಲಗೊಳಿಸಿವೆ.
ಸ್ಫೋಟಕ ಸಾಧನ ನಿಷ್ಕ್ರಿಯಗೊಳಿಸಿ (IED Neutralised) ವಶ ಪಡಿಸಿಕೊಂಡಿವೆ. ಇದು ಸಂಭವನೀಯ ದೊಡ್ಡ ದಾಳಿಯನ್ನ ತಪ್ಪಿಸಿದಂತಾಗಿದೆ. ಇದನ್ನೂ ಓದಿ: ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ – ದೆಹಲಿಯಲ್ಲಿ ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ
VIDEO | Kathua: An encounter broke out between security forces and terrorists in the district, following which joint forces intensified the search operation.
(Disclaimer: Visuals deferred by unspecified time)
(Full VIDEO available on https://t.co/n147TvrpG7) pic.twitter.com/wv1E4CEpIG
— Press Trust of India (@PTI_News) January 8, 2026
ಗುಪ್ತಚರ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡಿದ್ದ ಸೇನೆ (Indian Army) ಮತ್ತು ಪೊಲೀಸರು ಅರಣ್ಯ ಪ್ರದೇಶವನ್ನ ತೀವ್ರವಾಗಿ ಶೋಧಿಸಿದ್ದರು. ಈ ವೇಳೆ ಸ್ಫೋಟಕ್ಕೆ ಇಟ್ಟಿದ್ದ 4 ಕೆಜಿ ಐಇಡಿ ಯನ್ನ ಜಪ್ತಿ ಮಾಡಿದ್ದು, ಹೆಚ್ಚುವರಿ ಸಾಕ್ಷ್ಯಗಳನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ತಮಿಳುನಾಡಿನ ದೀಪೋತ್ಸವಕ್ಕೆ ಅನುಮತಿ – ಡಿಎಂಕೆ ಸರ್ಕಾರಕ್ಕೆ ಹಿನ್ನಡೆ, ಕೋರ್ಟ್ ತೀರ್ಪಿಗೆ ಭಕ್ತರ ಸಂತಸ
ಸುಳಿವು ಸಿಕ್ಕಿದ್ದೆಲ್ಲಿ?
ಥನಮಂಡಿ ತಹಸಿಲ್‌ನ ಡೋರಿ ಮಾಲ್‌ನಲ್ಲಿರುವ ಕಲ್ಲಾರ್‌ನ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ಬುಧವಾರದಿಂದಲೇ ಕಾರ್ಯಾಚರಣೆ ಕೈಗೊಂಡಿದ್ದರು. ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿದ್ದ ಬಗ್ಗೆ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಬಂಡೆಗಳ ಸಂದಿನಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡುಬಂದವು. ಪರಿಶೀಲಿಸಿದಾಗ ಅದ್ರಲ್ಲಿ ಸುಮಾರು 4 ಕೆಜಿ ತೂಕದ ಅತ್ಯಾಧುನಿಕ ಸುಧಾರಿತ ಸ್ಫೋಟಕ ಸಾಧನಗಳಿದ್ದದ್ದು ಕಂಡುಬಂದಿತು.
ಒಂದು ವೇಳೆ ಸ್ಫೋಟಗೊಂಡಿದ್ದರೆ, ಭಾರೀ ಪ್ರಮಾಣದಲ್ಲಿ ಹಾನಿಯಾಗುತ್ತಿತ್ತು ಎನ್ನಲಾಗಿದೆ. ಸದ್ಯ ಐಇಡಿ ವಶಕ್ಕೆ ಪಡೆದಿರುವ ಭದ್ರತಾ ಪಡೆಗಳು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ರವಾನಿಸಿವೆ. ದಟ್ಟಾರಣ್ಯದಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: 10 ಹೆಣ್ಣುಮಕ್ಕಳ ನಂತರ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ – ಮಕ್ಕಳ ಹೆಸ್ರು ಕೇಳಿದಾಗ ಹೆಣಗಾಡಿದ ತಂದೆ, ವಿಡಿಯೋ ವೈರಲ್


