ಶ್ರೀನಗರ: ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದು, ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ
ನಿನ್ನೆಯಷ್ಟೇ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನೊಬ್ಬನನ್ನು ಗುಂಡಿಕ್ಕಿ ಕೊಂದರು. ಈ ವೇಳೆ ಆತನ ಸಹೋದರ ಗಾಯಗೊಂಡಿದ್ದರು.
ಮೃತ ವ್ಯಕ್ತಿ ಸುನೀಲ್ ಕುಮಾರ್ ಭಟ್ ಎಂದು ಗುರುತಿಸಲಾಗಿದೆ. ಆತನ ಸಹೋದರ ಪಿಂಟು ಅವರಿಗೆ ಗಾಯಗಳಾಗಿವೆ. ಘಟನೆ ಬಳಿಕ ಸ್ಥಳದಲ್ಲಿ ಭದ್ರತಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತನ ಹತ್ಯೆ ಬಳಿಕ ಮತ್ತಷ್ಟು ದಾಳಿಗಳ ಎಚ್ಚರಿಕೆ
ಈ ಘಟನೆಯಾದ ಮಾರನೇ ದಿನವೇ ಒಂದೇ ಕುಟುಂಬದ ಆರು ಮಂದಿ ಶವಗಳು ಪತ್ತೆಯಾಗಿವೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.