ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಗಂಡೇರ್ಬಲ್ ಜಿಲ್ಲೆಯ ಪ್ರಸಿದ್ಧ ರೆಸಾರ್ಟ್ ಪಟ್ಟಣವಾದ ಸೋನಾಮಾರ್ಗ್ (Sonamarg) ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.
ಶನಿವಾರ ಸಂಜೆ ವೇಳೆಗೆ ಈ ಅವಘಡ ಸಂಭವಿಸಿದ್ದು, ಮೊದಲು ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸೋನಾಮಾರ್ಗ್ ಮಾರುಕಟ್ಟೆಗೆ ಹರಡಿದೆ. ಇದರಿಂದ ಅಕ್ಕಪಕ್ಕದ ಅಂಗಡಿಗಳಿಗೂ ಕೆನ್ನಾಲಿಗೆ ಚಾಚಿಕೊಂಡಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಮುಂದಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಆಪ್ ಸೋಲಿನ ಬೆನ್ನಲ್ಲೇ ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ
ಈ ಕುರಿತು ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಜಮ್ಮು & ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ, ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಹತೋಟಿ ತರಲು ಬೇಕಾದ ಎಲ್ಲಾ ನೆರವು ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಎಕ್ಸ್‌ನಲ್ಲಿ ಏನಿದೆ?
ಸೋನಾಮಾರ್ಗ್ ಮಾರುಕಟ್ಟೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ತೀವ್ರ ದುಃಖಿತನಾಗಿದ್ದೇನೆ. ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡುವಂತೆ ಸ್ಥಳೀಯ ಆಡಳಿತ ಕಚೇರಿಗಳಿಗೆ ಸೂಚನೆ ನೀಡಿದ್ದೇನೆ. ಅವಘಡದಲ್ಲಿ ಹಾನಿಯಾಗಿರುವ ಎಲ್ಲಾ ಕುಟುಂಬ ಹಾಗೂ ಅಂಗಡಿಯವರೊಂದಿಗೆ ನಾವು ಸದಾ ಜೊತೆಗಿದ್ದು, ನಿಮ್ಮ ಚೇತರಿಕೆಗೆ ಬೆಂಬಲ ನೀಡಲು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತೇವೆ ಎಂದು ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: Chhattisgarh | 12 ನಕ್ಸಲರ ಎನ್‌ಕೌಂಟರ್ – ಇಬ್ಬರು ಭದ್ರತಾ ಸಿಬ್ಬಂದಿ ಸಾವು