ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಚಾರ್ಸೂ ಗ್ರಾಮದಲ್ಲಿ ಮಂಗಳವಾರ ನಡೆದ ಎನ್‍ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಪ್ರತಿಕ್ರಿಯಿಸಿ,ಹತ್ಯೆಗೀಡಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು
Advertisement
Advertisement
ಗ್ರಾಮದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
Advertisement
ಭದ್ರತಾ ತಂಡ ಸ್ಥಳವನ್ನು ಸುತ್ತುವರೆದಿದೆ. ಈ ವೇಳೆ ಅಡಗಿಕೊಂಡಿದ್ದ ಭಯೋತ್ಪಾದಕ ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಇದನ್ನೂ ಓದಿ: ಕಳೆದು ಹೋಗಿದ್ದ ಬೆಕ್ಕು 17 ವರ್ಷಗಳ ಬಳಿಕ ಪತ್ತೆ- ಈ ರೋಚಕ ಕಥೆ ಸಖತ್ ಥ್ರಿಲ್ಲಿಂಗ್
Advertisement
ಹೆಚ್ಚಿನ ಭಯೋತ್ಪಾದಕರು ಈ ಜಾಗದಲ್ಲಿ ಅಡಗಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಕಾಶ್ಮೀರದಲ್ಲಿ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಅರೆಸೇನಾ ಪಡೆಗಳ ಜಂಟಿ ತಂಡಗಳ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ತಿಳಿದು ಬಂದಿದೆ.
ಇದು ಈ ವರ್ಷದ 21ನೇ ಎನ್‍ಕೌಂಟರ್ ಆಗಿದ್ದು, ಇಲ್ಲಿಯವರೆಗೆ, ಭದ್ರತಾ ಪಡೆಗಳು 36 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. 20ಕ್ಕೂ ಹೆಚ್ಚು ಭಯೋತ್ಪಾದಕರನ್ನು ಜೀವಂತವಾಗಿ ಸೆರೆಹಿಡಿಯಲಾಗಿದ್ದು, ಭಯೋತ್ಪಾದಕ ಸಹಚರರ ವಿರುದ್ಧದ ಕಾರ್ಯಾಚರಣೆಯೂ ಮುಂದುವರಿದಿದೆ.