LatestMain PostNational

ಪಾರ್ವತಿ ವೇಷದಲ್ಲಿ ನರ್ತಿಸುತ್ತಿದ್ದ 20ರ ಹುಡುಗ- ಹೃದಯಾಘಾತದಿಂದ ಸ್ಟೇಜ್‍ನಲ್ಲೇ ಕುಸಿದು ಸಾವು

ಶ್ರೀನಗರ: ಪಾರ್ವತಿಯ(Goddess Parvati) ವೇಷ ಧರಿಸಿ ಹುಡುಗಿಯಂತೆ ನರ್ತಿಸುತ್ತಿದ್ದ 20 ವರ್ಷದ ಹುಡುಗನೊಬ್ಬ ಹೃದಯಾಘಾತದಿಂದ ವೇದಿಕೆಯಲ್ಲೇ(Stage) ಕುಸಿದು ಸಾವನ್ನಪ್ಪಿದ ಘಟನೆ ಜಮ್ಮುವಿನಲ್ಲಿ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ(Jammu and Kashmir) ಬಿಷ್ನಾಹ್ ಪ್ರದೇಶದಲ್ಲಿ ಯೋಗೇಶ್ ಗುಪ್ತಾ ನರ್ತಕಿಯ ವೇಷ ಧರಿಸಿ ಪ್ರದರ್ಶನ ನೀಡುತ್ತಿದ್ದ. ಈ ವೇಳೆ ಹೃದಯಾಘಾತವಾಗಿ(Heart Attack) ಅಲ್ಲೇ ಕುಸಿದು ಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವೀಡಿಯೋದಲ್ಲಿ ಏನಿದೆ?: ವೈರಲ್ ವೀಡಿಯೋದಲ್ಲಿ ಪಾರ್ವತಿ ವೇಷ ಧರಿಸಿ ಯೋಗೇಶ್ ಗುಪ್ತಾ ನೃತ್ಯ ಮಾಡುತ್ತಿದ್ದ. ಅಲ್ಲಿ ನೆರೆದಿದ್ದ ಜನರೆಲ್ಲರೂ ಆ ನೃತ್ಯವನ್ನು ಆಹ್ಲಾದಿಸುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಆತ ಕುಸಿದು ಅಲ್ಲಿಯೇ ಬೀಳುತ್ತಾನೆ. ಅದಾದ ಬಳಿಕವೂ ಕೆಲ ಸೆಕೆಂಡಿನ ನಂತರ ಕೆಲವು ಸ್ಟೇಪ್‍ಗಳನ್ನು ಮಾಡುತ್ತಾನೆ. ಆ ಬಳಿಕ ಆತ ಅಲ್ಲಿಂದ ಏಳುವುದೇ ಇಲ್ಲ. ಇದನ್ನೂ ಓದಿ: ರಾಜಪಥ್‍ನಿಂದ ಕರ್ತವ್ಯ ಪಥವಾಗಿ ಬದಲಾದ ದೆಹಲಿ ಐಕಾನಿಕ್ ರಸ್ತೆ ಹೇಗೆ ಅಭಿವೃದ್ಧಿಯಾಗಿದೆ ಗೊತ್ತಾ?

ಆದರೆ ದುರಂತವೆಂದರೆ ಕೆಲಕಾಲ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಆತ ಇನ್ನೂ ಪ್ರದರ್ಶನವನ್ನೇ ನೀಡುತ್ತಿದ್ದಾನೆ ಎಂದು ಕೊಳ್ಳುತ್ತಾರೆ. ಆದರೆ ಕೆಲ ನಿಮಿಷಗಳಾದರೂ ಆತ ಏಳದಿದ್ದಾಗ ಅಲ್ಲಿದ್ದ ಶಿವನ ವೇಷವನ್ನು ಧರಿಸಿದ ಯೋಗೇಶ್ ಬಳಿ ಹೋಗಿ ಪರೀಕ್ಷೆ ನಡೆಸುತ್ತಾನೆ. ಆದರೂ ಆತನಿಗೆ ಎಚ್ಚರವಾಗಿಲ್ಲವೆಂದು ಅಲ್ಲಿದ್ದ ಸಿಬ್ಬಂದಿಯನ್ನು ಕರೆಯುತ್ತಾನೆ. ತಕ್ಷಣ ಯೋಗೇಶನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಯೋಗೇಶ್ ಗುಪ್ತಾ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು. ಇದನ್ನೂ ಓದಿ: ಉಗ್ರ ಯಾಕೂಬ್ ಮೆಮನ್ ಸಮಾಧಿ ಸೌಂದರ್ಯೀಕರಣ – ಉದ್ಧವ್‌ ವಿರುದ್ಧ ಬಿಜೆಪಿ ಕಿಡಿ

Live Tv

Leave a Reply

Your email address will not be published.

Back to top button