CrimeLatestLeading NewsMain PostNational

ಪುಲ್ವಾಮಾದಲ್ಲಿ ಪೊಲೀಸ್‌ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ: ಪೊಲೀಸ್‌ ಕಾನ್ಸ್‌ಟೆಬಲ್‌ ಮೇಲೆ ಉಗ್ರರು ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಪುಲ್ವಾಮಾದ ಗಡೂರ ಪ್ರದೇಶದಲ್ಲಿ ನಡೆದಿದೆ.

ಗಾಯಗೊಂಡಿರುವ ಪೊಲೀಸ್‌ ಕಾನ್ಸ್‌ಟೆಬಲ್‌ಯನ್ನು ರಿಯಾಜ್ ಅಹ್ಮದ್ ಥೋಕರ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ನಿವಾಸಿಯಾಗಿದ್ದಾರೆ. ಶುಕ್ರವಾರ ಇವರ ನಿವಾಸದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ಗುಂಡು ತಗುಲಿದೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ ಕಾನ್ಸ್‌ಟೆಬಲ್‌ ಮೇಲೆ ಕೇಂದ್ರಾಡಳಿತ ಪ್ರದೇಶದ ಪುಲ್ವಾಮಾದಲ್ಲಿ ಗುಂಡಿನ ದಾಳಿ ನಡೆದಿದೆ. ಪುಲ್ವಾಮಾದ ಗುಡ್ರೂನ್‍ನಲ್ಲಿರುವ ಅವರ ನಿವಾಸದಲ್ಲಿ ರಿಯಾಜ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಿಯಾಜ್ ಅವರಿಗೆ ಗುಂಡು ತಗುಲಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ರಿಯಾಜ್ ಅಹ್ಮದ್ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಹೆಚ್ಚಿನ ಬಿಗಿಭದ್ರತೆಯನ್ನು ಕಲ್ಪಿಸಲಾಗಿದೆ.  ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಮಡಿಕೇರಿ ನಗರದಲ್ಲಿ ಜೆಸಿಬಿ ಘರ್ಜನೆ

ಉಗ್ರರ ದಾಳಿಯು ಈ ವಾರದಲ್ಲಿ ಎರಡನೇ ಬಾರಿಯಾಗಿದ್ದು, ಕಾಶ್ಮೀರಿ ಪಂಡಿತರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಕಂದಾಯ ಇಲಾಖೆಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿತ್ತು. ಇದನ್ನೂ ಓದಿ: ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ನಿರ್ಬಂಧ ಖಂಡಿಸಿದ G7

Leave a Reply

Your email address will not be published.

Back to top button