ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಾರಾಗೃಹದ ಹಿರಿಯ ಅಧಿಕಾರಿ ಹೇಮಂತ್ ಲೋಹಿಯಾ ಅವರನ್ನು ನಿವಾಸದಲ್ಲಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
1992ರ ಬ್ಯಾಚ್‌ನ ಐಪಿಎಸ್ (IPS officer) ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕತ್ತು ಸೀಳಿ ಅವರನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ
ಅವರನ್ನು ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು. ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಮನೆಯ ಸಹಾಯಕ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.
ತನಿಖಾ ಪ್ರಕ್ರಿಯೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಕುಟುಂಬವು ತಮ್ಮ ಹಿರಿಯ ಅಧಿಕಾರಿಯ ಸಾವಿನ ಬಗ್ಗೆ ದುಃಖಿತರಾಗಿದ್ದೇವೆ ಎಂದು ಸಿಂಗ್ ವಿಷಾದಿಸಿದ್ದಾರೆ. ಇದನ್ನೂ ಓದಿ: JEE Mains ಪರೀಕ್ಷೆಯಲ್ಲಿ ಅಕ್ರಮ – ಲ್ಯಾಂಡ್ ಆದ ಕೂಡಲೇ ರಷ್ಯಾ ಪ್ರಜೆ ಅರೆಸ್ಟ್
ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿದ್ದ ದಿನದಲ್ಲಿ ಈ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.