ನವದೆಹಲಿ: ಸಿಆರ್‌ಪಿಎಫ್ (CRPF) ಯೋಧರ ಮೇಲೆ ಪುಲ್ವಾಮಾದಲ್ಲಿ ನಡೆದ ದಾಳಿ (Pulwama Attack) ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ರಾಜ್ಯ ಸ್ಥಾನಮಾನವನ್ನು (Special Status of Jammu and Kashmir) ರದ್ದು ಪಡಿಸಲು ಮತ್ತು ರಾಜ್ಯವನ್ನು ಭಾರತೀಯ ಒಕ್ಕೂಟಕ್ಕೆ ಸಂಪೂರ್ಣವಾಗಿ ಸೇರಿಸುವ ಕ್ರಮಕ್ಕೆ ಪ್ರೇರೇಪಿಸಿತು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.
ವಿಶೇಷ ರಾಜ್ಯ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ವೇಳೆ ಸಂವಿಧಾನ ಪ್ರಕಾರವಾಗಿ ರಾಜ್ಯ ಸ್ಥಾನಮಾನವನ್ನು ರದ್ದುಗೊಳಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿ – ಭಯೋತ್ಪಾದಕಿ ಮಗಳಿಗೆ ಸಾಥ್ ಕೊಟ್ಟಿದ್ದ ತಂದೆ, ಬಯಲಾಯ್ತು ಸ್ಫೋಟಕ ಸತ್ಯ
ಆರ್ಟಿಕಲ್ 35(ಎ) ನಂತಹ ನಿಬಂಧನೆಗಳಿಂದಾಗಿ ಜಮ್ಮು ಕಾಶ್ಮೀರದ ನಿವಾಸಿಗಳು ಮೂಲಭೂತ ಹಕ್ಕುಗಳನ್ನು ಸಂಪೂರ್ಣವಾಗಿ ಆನಂದಿಸಲು ಸಾಧ್ಯವಾಗಲಿಲ್ಲ. ಹಿಂದಿನ ತಪ್ಪನ್ನು ಸರಿಪಡಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ವಿಶೇಷ ಸ್ಥಾನಮಾನ ರದ್ದಾದ ಬಳಿಕ ರಾಜ್ಯದಲ್ಲಿ ಹೂಡಿಕೆಗಳು ಹೆಚ್ಚಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಈ ನಿರ್ಧಾರದಿಂದ ಸಕಾರಾತ್ಮಕ ಫಲಿತಾಂಶಗಳು ಬರುತ್ತಿವೆ ಎಂದು ತಿಳಿಸಿದರು.
ಪಂಜಾಬ್ ವಿಭಜಿಸುವ ಮೂಲಕ ಹರಿಯಾಣ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶವನ್ನು ರಚಿಸಲು 1966 ರಲ್ಲಿ ಅಳವಡಿಸಿಕೊಂಡ ಮಾದರಿಯಂತೆಯೇ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಶಾಸಕಾಂಗದೊಂದಿಗೆ ಕೇಂದ್ರಾಡಳಿತ ಪ್ರದೇಶವನ್ನಾಗಿ ಕಾರ್ಯನಿರ್ವಹಿಸುತ್ತಿದೆ. ಕೇವಲ ಪೊಲೀಸ್ ಅಧಿಕಾರ ಮಾತ್ರ ಕೇಂದ್ರದ ಬಳಿಯಿದೆ. ಭವಿಷ್ಯದಲ್ಲಿ ಅದು ರಾಜ್ಯದ ಸ್ಥಾನಮಾನವನ್ನು ಮರಳಿ ಪಡೆಯಬಹುದು ಎಂದು ಹೇಳಿದರು. ಇದನ್ನೂ ಓದಿ: ಕಾರಿನ ‘ಕೀ’ ಯಿಂದ ಪುಲ್ವಾಮಾ ತನಿಖೆ ಓಪನ್! – ಕೀ ಪತ್ತೆಯಾದ ರೋಚಕ ಕಥೆ ಓದಿ
2019ರ ಆಗಸ್ಟ್ 6 ರಂದು ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು (Abrogation of Article 370) ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂ ಮೊರೆ ಹೋಗಿದ್ದರು. 370ನೇ ವಿಧಿಯನ್ನು ರದ್ದುಗೊಳಿಸಿದ ನಾಲ್ಕು ವರ್ಷಗಳ ನಂತರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ನೇತೃತ್ವದ ಸಂವಿಧಾನ ಪೀಠವು 20 ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ.
Web Stories