ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು (Article 370 Case) ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, 16 ದಿನಗಳ ಮ್ಯಾರಥಾನ್ ವಿಚಾರಣೆಯ ನಂತರ ಸುಪ್ರೀಂಕೋರ್ಟ್ (Supreme Court) ತನ್ನ ಆದೇಶವನ್ನು ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರವನ್ನು ಪ್ರಶ್ನಿಸುವ ಒಂದು ಬ್ಯಾಚ್ ಅರ್ಜಿಗಳನ್ನು ಆಲಿಸಿತು.
Advertisement
Advertisement
ಕೇಂದ್ರವು ತನ್ನ ಲಾಭಕ್ಕಾಗಿ ಎಲ್ಲವನ್ನೂ ಮಾಡುತ್ತಿದೆ ಮತ್ತು ನೆಲದ ನಿಯಮಕ್ಕೆ ಬದ್ಧವಾಗಿಲ್ಲ ಎಂದು ಅರ್ಜಿದಾರರು ವಿಚಾರಣೆ ವೇಳೆ ಆರೋಪಿಸಿದರು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, 370 ನೇ ವಿಧಿಯನ್ನು ರದ್ದುಗೊಳಿಸಿರುವುದು ಅಧಿಕಾರದ ದುರುಪಯೋಗದ ಶ್ರೇಷ್ಠ ಉದಾಹರಣೆಯಾಗಿದೆ ಎಂದು ವಾದಿಸಿದ್ದರು. ಇದನ್ನೂ ಓದಿ: ಹಿಂದೂ ಹೆಸರನ್ನು ನೀಡಿದವರೇ ವಿದೇಶಿಯರು: ಅಧೀರ್ ರಂಜನ್ ಚೌಧರಿ
Advertisement
ಕೇಂದ್ರವು ಆರ್ಟಿಕಲ್ 370ರ ರದ್ದತಿಗೆ ಬೆಂಬಲವಾಗಿ ವಾದಿಸಿತು ಮತ್ತು ಹಿಂದಿನ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ನಿಬಂಧನೆಯನ್ನು ರದ್ದುಗೊಳಿಸುವಲ್ಲಿ ಯಾವುದೇ ʼಸಾಂವಿಧಾನಿಕ ವಂಚನೆ ಎಸಗಿಲ್ಲ ಎಂದು ಪ್ರತಿಪಾದಿಸಿತು.
Advertisement
ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಮ್ಮು ಮತ್ತು ಕಾಶ್ಮೀರದ ಸಂವಿಧಾನವು ಭಾರತದ ಸಂವಿಧಾನಕ್ಕೆ ಅಧೀನವಾಗಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕ್ರಮವು ʼತಾತ್ಕಾಲಿಕ ಕ್ರಮʼ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಭವಿಷ್ಯದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ರಾಜ್ಯವಾಗಿ ಹಿಂತಿರುಗಿಸಿದರೆ, ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.
Web Stories