ನವದೆಹಲಿ: ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದು ಪಡಿಸಿದ್ದಕ್ಕೆ, ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಆದರೆ, ಅಚ್ಚರಿ ಎಂಬಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷಗಳಲ್ಲಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿದವರ ಪೈಕಿ ಅರವಿಂದ್ ಕೇಜ್ರಿವಾಲ್ ಏಕೈಕರಾಗಿದ್ದಾರೆ.
Advertisement
ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಮ್ಮು ಮತ್ತು ಕಾಶ್ಮೀರದ ಕುರಿತು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಈ ನಿರ್ಧಾರದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸಲಿದೆ. ಅಲ್ಲದೆ, ರಾಜ್ಯವು ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದ್ದಾರೆ.
Advertisement
We support the govt on its decisions on J & K. We hope this will bring peace and development in the state.
— Arvind Kejriwal (@ArvindKejriwal) August 5, 2019
Advertisement
ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ರಾಜಕೀಯ ಪಯಣದಲ್ಲಿ ವಿವಿಧ ವಿಷಯಗಳ ಕುರಿತು, ವಿಶೇಷವಾಗಿ ದೆಹಲಿಯ ಸ್ವಾಯತ್ತತೆಗೆ ಸಂಬಂಧಿಸಿದಂತೆ ಈವರೆಗೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಲೇ ಬಂದಿದೆ. ವರ್ಷಗಳಿಂದ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದ ಅರವಿಂದ್ ಕೇಜ್ರಿವಾಲ್ ಅವರು, ಕೇಂದ್ರದ ಬಿಜೆಪಿ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಮೂಲಕ ದೆಹಲಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಈ ಮೂಲಕ ಚುನಾಯಿತ ಸ್ಥಳೀಯ ಸರ್ಕಾರವನ್ನು ಕಡೆಗಣಿಸುತ್ತಿದೆ ಎಂದು ಹಲವು ವರ್ಷಗಳಿಂದ ಆರೋಪಿಸುತ್ತಲೇ ಬಂದಿದ್ದಾರೆ.
Advertisement
ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ಹಾಗೂ 35ಎ ಅಡಿ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಕುರಿತ ವಿಧೇಯಕಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಸಂಸತ್‍ನಲ್ಲಿ ಹೇಳಿದ್ದರು.
370ನೇ ವಿಧಿಯನ್ನು ಸಂವಿಧಾನದಿಂದ ತೆಗೆದು ಹಾಕಲು ಒಂದು ಸೆಕೆಂಡ್ ಕೂಡ ತಡವಾಗಬಾರದು ಎಂದು ಗೃಹ ಸಚಿವ ಅಮಿತ್ ಶಾ ಅವರು ಸಂಸತ್‍ನಲ್ಲಿ ಘೋಷಿಸಿದರು. ಅಮಿತ್ ಶಾ ಘೋಷಿಸುತ್ತಿದ್ದಂತೆ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಲು ಪ್ರಾರಂಭಿಸಿದವು.
ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ದೆಹಲಿಯಂತೆ ಶಾಸಕಾಂಗವನ್ನು ಹೊಂದಿರಲಿದೆ. ಲಡಾಕ್ ಶಾಸಕಾಂಗವಿಲ್ಲದೆ, ಕೇವಲ ಕೇಂದ್ರಾಡಳಿತ ಪ್ರದೇಶವಾಗಿರಲಿದೆ ಎಂದು ಸಂಸತ್‍ನಲ್ಲಿ ಅಮಿತ್ ಶಾ ತಿಳಿಸಿದ್ದಾರೆ.