ಶ್ರೀನಗರ: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತದ ಭದ್ರತಾ ಪಡೆ ಎನ್‍ಕೌಂಟರ್ ಮಾಡಿದೆ. ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಶೊಪಿಯಾನ್ ಎಂಬಲ್ಲಿ ಈ ಎನ್‍ಕೌಂಟರ್ ನಡೆದಿದೆ.
ಶೊಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವದಿಂದಲೇ ಗುಂಡಿನ ಸದ್ದು ಕೇಳತೊಡಗಿತ್ತು. ಬೆಳಗ್ಗೆ 4.20ಕ್ಕೆ ಆರಂಭವಾದ ಗುಂಡಿನ ದಾಳಿ 8.30ಕ್ಕೆ ಅಂತ್ಯಗೊಂಡಿದೆ. ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನ ಎನ್ ಕೌಂಟರ್ ಮಾಡಲಾಗಿದೆ. ದಾಳಿ ನಡೆದ ಪ್ರದೇಶದಲ್ಲಿ ಕೆಟ್ಟೆಚ್ಚರ ವಹಿಸಲಾಗಿದೆ. ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಈ ಗುಂಡಿನ ದಾಳಿಯಲ್ಲಿ ಭಾರತೀಯ ಐವರು ಯೋಧರು ಗಾಯಗೊಂಡಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಮೂವರು ಯೋಧರ ಆರೋಗ್ಯ ಸ್ಥಿರವಾಗಿದೆ. ಉಗ್ರರು ಶೊಪಿಯಾನ್ ಜಿಲ್ಲೆಯಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಸಿಆರ್ ಪಿಎಫ್ ಮತ್ತು ವಿಶೇಷ ತನಿಖಾ ತಂಡ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಉಗ್ರರು ಗುಂಡಿನ ದಾಳಿ ನಡೆಸುತ್ತಿರುವಾಗಲೇ ನಮ್ಮ ಯೋಧರು ಸಹ ಪ್ರತಿದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಎಲ್‍ಒಸಿ(ಗಡಿ ನಿಯಂತ್ರಣಾ ರೇಖೆ) ಯ ಸುಮಾರು 50 ಕಡೆಗಳಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ನಿರಂತರವಾಗಿ ಶೆಲ್ ದಾಳಿ ಕೂಡ ಮಾಡಿದೆ. ಪಾಕಿಸ್ತಾನ ಸೇನೆಯ ಉದ್ಧಟತನಕ್ಕೆ ಭಾರತ ಕೂಡ ಅದೇ ದಾಟಿಯಲ್ಲಿ ಉತ್ತರ ನೀಡುತ್ತಿದೆ. ಪಾಕ್ ಸೇನೆಯ ಮೇಲೆ ನಿರಂತರ ಗುಂಡಿನ ದಾಳಿ ನಡೆಸಿದೆ. ಮಂಗಳವಾರ ಸಂಜೆ 5.30ಕ್ಕೆ ಫಿರಂಗಿ ಮೂಲಕ ದೊಡ್ಡ ಶೆಲ್ ದಾಳಿ ಪ್ರಾರಂಭಿಸುವ ಮೂಲಕ ಅಖನೂರ್, ನೌಶೇರಾ, ಕೃಷ್ಣಾ ಘಾಟಿ ಸೆಕ್ಟರ್ ಗಳಲ್ಲಿ ಪಾಕ್ ಪುಂಡಾಟ ಮೆರೆಯುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv