ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಕಾಂಗ್ರೆಸ್ (Congress) ಬೆಂಬಲ ಇಲ್ಲದೇ ನ್ಯಾಷನಲ್ ಕಾನ್ಫರೆನ್ಸ್ (NC) ಈಗ ಬಹುಮತ ಪಡೆದಿದೆ. 4 ಮಂದಿ ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ.
ಒಟ್ಟು 90 ಸ್ಥಾನಗಳಿಗೆ ಚುನಾವಣೆ (Election) ನಡೆದಿದ್ದು ಸರ್ಕಾರ ರಚನೆಗೆ 46 ಶಾಸಕರ ಬೆಂಬಲ ಬೇಕು. ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42, ಕಾಂಗ್ರೆಸ್ 6 ಸ್ಥಾನ ಗೆದ್ದರೆ 7 ಮಂದಿ ಪಕ್ಷೇತರರಯ ಗೆದ್ದಿದ್ದರು. 7 ಮಂದಿಯ ಪೈಕಿ 4 ಮಂದಿ ಎನ್‌ಸಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ರತನ್ ಟಾಟಾಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರದ ಶಿಫಾರಸು
Advertisement
Advertisement
ಕಾಂಗ್ರೆಸ್ ಮತ್ತು ಪಕ್ಷೇತರರ ಬೆಂಬಲದಿಂದಾಗಿ ಎನ್‌ಸಿ ಬಲ ಮತ್ತಷ್ಟು ಗಟ್ಟಿಯಾಗಲಿದೆ. ಪಕ್ಷೇತರರ ಬಲ ಇರುವ ಕಾರಣ ಮಂತ್ರಿ ಸ್ಥಾನ ಹಂಚುವ ವೇಳೆ ಕಾಂಗ್ರೆಸ್ ಶಾಸಕರಿಗೆ ಮಂತ್ರಿಗಿರಿ ಸಾಧ್ಯತೆ ಕಡಿಮೆಯಿದೆ.
Advertisement
ಯಾರು ಎಷ್ಟು ಸ್ಥಾನ?
ನ್ಯಾಷನಲ್ ಕಾನ್ಫರೆನ್ಸ್ – 42
ಬಿಜೆಪಿ – 29
ಕಾಂಗ್ರೆಸ್ – 06
ಪಿಡಿಪಿ – 03
ಜೆಪಿಸಿ – 1
ಸಿಪಿಐ(ಎಂ)- 01
ಆಪ್ – 01
ಇತರರು – 07