ನವದೆಹಲಿ: ಮೂವರು ಉಗ್ರರಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಜಮ್ಮು-ಕಾಶ್ಮೀರದ ಡಿವೈಎಸ್‍ಪಿ ದೇವಿಂದರ್ ಸಿಂಗ್ ಅವರನ್ನು ಸೇವೆಯಿಂದ ವಜಾಗೊಳ್ಳುವ ಸಾಧ್ಯತೆಯಿದೆ. ಆದರೆ ಅಧಿಕೃತ ಆದೇಶ ಹೊರ ಬೀಳುವುದು ಮಾತ್ರ ಬಾಕಿ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ದೇವೇಂದರ್ ಸಿಂಗ್ ಜಮ್ಮು-ಕಾಶ್ಮೀರದ ಬಾದಾಮಿ ಬಾಗ್ ಕಂಟೋನ್ಮೆಂಟ್ ಬಳಿಯ ಎಕ್ಸ್ ವಿ ಕಾಪ್ರ್ಸ್ ಸೇನೆಯ ಪ್ರಧಾನ ಕಚೇರಿಯ ಪಕ್ಕದ ತಮ್ಮ ಮನೆಯಲ್ಲಿ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು. ಈ ಸಂಬಂಧ ಮಾಹಿತಿ ಸಿಗುತ್ತಿದ್ದ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಆದರೆ ಈಗ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
Advertisement
#Breaking | Davinder Singh dismissed from his service, official announcement expected shortly.
TIMES NOW's Pradeep Dutta with details. pic.twitter.com/7jRGYfVEBU
— TIMES NOW (@TimesNow) January 15, 2020
Advertisement
ದೇವಿಂದರ್ ಸಿಂಗ್ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆ್ಯಂಟಿ ಹೈಜಾಕಿಂಗ್ ಸ್ಕ್ವಾಡ್‍ನಲ್ಲಿ ಡಿಎಸ್‍ಪಿ ಕಾರ್ಯನಿರ್ವಹಿಸುತ್ತಿದ್ದರು. ಅಷ್ಟೇ ಅಲ್ಲದೆ 2019ರ ಆಗಸ್ಟ್ 15ರಂದು ಶೌರ್ಯ ಪ್ರಶಸ್ತಿ ಪಡೆದಿದ್ದರು. ಆದರೆ ಈಗ ಉಗ್ರರಿಗೆ ಆಶ್ರಯ ನೀಡಿ ಸಿಕ್ಕಿಬಿದ್ದಿದ್ದಾರೆ.
Advertisement
ಏನಿದು ಪ್ರಕರಣ?
ಜಮ್ಮು-ಕಾಶ್ಮೀರದ ಡಿವೈಎಸ್‍ಪಿ ದೇವಿಂದರ್ ಸಿಂಗ್ ಹಾಗೂ ದಕ್ಷಿಣ ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರರನ್ನು ಭಾನುವಾರ ಬಂಧಿಸಲಾಗಿತ್ತು. ಜಮ್ಮು-ಕಾಶ್ಮೀರದ ಪೊಲೀಸರು ಬಂಧಿತರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ವಿಚಾರಣೆ ಆರಂಭಿಸಿದ್ದರು.
Advertisement
ಆದರೆ ವಿಚಾರಣೆ ವೇಳೆ ದೇವೆಂದರ್ ಸಿಂಗ್, ಕಾರಿನಲ್ಲಿ ಉಗ್ರ ಸಂಘಟನೆಯ ಮುಷ್ತಾಕ್ ಮತ್ತು ರಫಿಯನ್ನು ಶರಣಾಗತಿಗೆಂದು ಪೊಲೀಸರಿಗೆ ಒಪ್ಪಿಸಲು ಕರೆದುಕೊಂಡು ಹೋಗುತ್ತಿದ್ದೆ ಎಂದು ಹೇಳಿದ್ದರು. ಆದರೆ ಅವರಿಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆಗೆ ಮಾಡಿದಾಗ, ಶರಣಾಗತಿಯ ಯಾವುದೇ ವಿಚಾರ ನಮಗೆ ಗೊತ್ತಿಲ್ಲ ಎಂದು ಹೇಳಿದ್ದರು. ಇದು ಪೊಲೀಸರಲ್ಲಿ ಸಾಕಷ್ಟು ಅನುಮಾನಗಳಿಗೆ ಕಾಣವಾಗಿತ್ತು.
ಪೊಲೀಸರಿಗೆ ಲಭ್ಯವಾದ ಪ್ರಾಥಮಿಕ ತನಿಖೆಯ ಮಾಹಿತಿ ಪ್ರಕಾರ, ದೇವೇಂದ್ರ ಸಿಂಗ್ ಹಾಗೂ ಉಗ್ರರರ ಮಧ್ಯೆ 12 ಲಕ್ಷ ರೂ.ಗೆ ಒಪ್ಪಂದವಾಗಿತ್ತು. ಅದರ ಪ್ರಕಾರ ದೇವೇಂದ್ರ ಸಿಂಗ್ ಉಗ್ರರಿಗೆ ಮನೆಯಲ್ಲಿ ಆಶ್ರಯ ನೀಡಿ, ಬಳಿಕ ತಮ್ಮ ಕಾರಿನಲ್ಲಿ ಕರೆದೊಯ್ಯುತ್ತಿದ್ದರು ಎಂದು ವರದಿಯಾಗಿದೆ.