ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu-Kashmir) ಬುದ್ಗಾಮ್ ಜಿಲ್ಲೆಯ ನ್ಯಾಯಾಲಯ ಸಂಕೀರ್ಣದ ಬಳಿ ನಡೆದ ಎನ್ಕೌಂಟರ್ನಲ್ಲಿ (Encounter) ಇಬ್ಬರು ಲಷ್ಕರ್-ಎ-ತೊಯ್ಬಾ (Lashkar-e-Toiba) ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಬಡ್ಗಾಮ್ ಮೂಲಕ ಭಯೋತ್ಪಾದಕರ ಚಲನೆಯ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಸೇನೆ ಮತ್ತು ಪೊಲೀಸರು ಜಂಟಿಯಾಗಿ ನ್ಯಾಯಾಲಯದ ಸಂಕೀರ್ಣದ ಬಳಿ ಒಂದು ಶಂಕಿತ ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ.
Advertisement
#BudgamEncounterUpdate: Both the killed terrorists are identified as Arbaaz Mir and Shahid Sheikh of Pulwama linked with the proscribed terror outfit LeT. Both the terrorists earlier escaped from recent encounter: ADGP Kashmir@JmuKmrPolice https://t.co/e7b70sJEbI
— Kashmir Zone Police (@KashmirPolice) January 17, 2023
Advertisement
ಈ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿ ಇಬ್ಬರು ಉಗ್ರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್ ಪದವೀಧರೆ ಈಗ ಚಾಯ್ವಾಲಿ – ಯುವತಿ ಭವಿಷ್ಯದ ಕನಸಿಗೆ ಜನರ ಮೆಚ್ಚುಗೆ
Advertisement
ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಹತ್ಯೆಗೀಡಾದ ಉಗ್ರರು ನಿಷೇಧಿತ ಲಷ್ಕರ್-ಎ-ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು. ಅವರನ್ನು ಪುಲ್ವಾಮಾ ಜಿಲ್ಲೆಯ ಅರ್ಬಾಜ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದೆ. ಮಗಮ್ ಪ್ರದೇಶದಲ್ಲಿ ಕಳೆದ ವಾರ ನಡೆದ ಶೋಧ ಕಾರ್ಯಾಚರಣೆಯಿಂದ ಇಬ್ಬರೂ ಭಯೋತ್ಪಾದಕರು ತಪ್ಪಿಸಿಕೊಂಡಿದ್ದರು ಎಂದು ತಿಳಿಸಿದರು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k