ಜುಮ್ಮು-ಕಾಶ್ಮೀರ: ಕಳೆದ 48 ಗಂಟೆಗಳಿಂದ ಜಮ್ಮು ಮತ್ತು ಕಾಶ್ಮೀರದ (Rain In Jammu Kashmir) ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪೂಂಚ್‌ನಲ್ಲಿ ಹಾನಿಯುಂಟುಮಾಡಿದೆ.
ಪೂಂಚ್‌ನ ಮಂಡಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ. ಪೂಂಚ್ ಮತ್ತು ಉತ್ತರ ಕಾಶ್ಮೀರದ ಭಾಗಗಳಲ್ಲಿ ಸರಿದ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದೆ. ಪರಿಣಾಮ 8 ರಿಂದ 10 ಕಟ್ಟಡಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ಇದನ್ನೂ ಓದಿ: ಮೋದಿ ಭಾಷಣವನ್ನು ತಿರುಚಿ ಅಪ್ಲೋಡ್ – ಪ್ರಿಯಾಂಕ್ ಖರ್ಗೆ ವಿರುದ್ಧ ದೂರು
ಈ ಸಂಬಂಧ ಸ್ಥಳೀಯ ನಿವಾಸಿ ಅಶ್ಫಾಕ್ ಹುಸೇನ್ ಪ್ರತಿಕ್ರಿಯಿಸಿ, ಭಾರೀ ಮಳೆಯಿಂದಾಗಿ 8 ರಿಂದ 10 ಮನೆಗಳಿಗೆ ಹಾನಿಯಾಗಿದೆ. ಕೆಲವು ಮನೆಗಳು ನೀರಿನಲ್ಲಿ ಕೊಚ್ಚಿ ಹೋದರೆ, ಇನ್ನೂ ಕೆಲವು ಭಾಗಶಃ ಹಾನಿಯಾಗಿದೆ. ಇದರ ಜೊತೆಗೆ ರಸ್ತೆಗಳು ಕೂಡ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.
#WATCH | Jammu & Kashmir: Several houses were damaged due to a landslide in Bedar village in the Mandi area of Poonch. pic.twitter.com/US8H9V4A6p
— ANI (@ANI) April 30, 2024
ಇನ್ನೊಂದು ಘಟನೆಯಲ್ಲಿ ಮಧ್ಯ ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್‌ನ ಸರ್ಬಲ್ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿದೆ. ಸೋನಾಮಾರ್ಗ್ ಅರಣ್ಯ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಆರ್ಥಿಕ ನಷ್ಟ ಸಂಭವಿಸಿಲ್ಲ.