ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ (Kathua-Mandli) ಸೇನಾ ಕಾರ್ಯಾಚರಣೆ ಮುಂದುವರಿದಿದೆ. 2ನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಉಗ್ರರನೊಬ್ಬನ್ನ ಗುಂಡಿಕ್ಕಿ ಕೊಂಡಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.
ಸೆ.28ರಂದು ಕಥುವಾದ ಮಂಡ್ಲಿಯಲ್ಲಿ ಭಯೋತ್ಪಾದಕರು (Terrorist) ಇರುವಿಕೆಯ ಮಾಹಿತಿ ದೊರೆತ ಆಧಾರದ ಮೇಲೆ ಭದ್ರತಾ ಪಡೆಗಳ ಶೋಧಕಾರ್ಯ ಪ್ರಾರಂಭವಾಯಿತು. ಕಥುವಾದಲ್ಲಿ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಭಾನುವಾರ ಭದ್ರತಾ ಪಡೆಯು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದಾರೆ.ಇದನ್ನೂ ಓದಿ: ಡೆಲಿವರಿ ಬಳಿಕ ಮಗನ ಜೊತೆಗಿನ ಫೋಟೋ ಹಂಚಿಕೊಂಡ ಪ್ರಣೀತಾ ಸುಭಾಷ್
ಈ ಕುರಿತು ಅಧಿಕಾರಿಗಳು ಮಾತನಾಡಿ, ಭಾನುವಾರ ಮಧ್ಯಾಹ್ನ ಬಿಲ್ಲವರ ತಹಸಿಲ್‌ನ ಕಾಗ್-ಮಂಡ್ಲಿಯಲ್ಲಿ ನಡೆದ ಎನ್‌ಕೌಂಟರ್‌ನ ಸ್ಥಳದಿಂದ ಭಯೋತ್ಪಾದಕನ ಮೃದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಮಾತನಾಡಿ, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಮೂರ್ನಾಲ್ಕು ವಿದೇಶಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶನಿವಾರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಎನ್‌ಕಂಟರ್ ಹಾಗೂ ಶೋಧಕಾರ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ. ಜೊತೆಗೆ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.
ಈ ಪ್ರದೇಶಕ್ಕೆ ಈಗಾಗಲೇ ಬಿಗಿ ಭದ್ರತೆಯನ್ನು ನೀಡಲಾಗಿದ್ದು, ಇಲ್ಲಿ ಅಡಗಿಕೊಂಡಿರುವ ಮೂರ್ನಾಲ್ಕು ವಿದೇಶಿ ಭಯೋತ್ಪಾದಕರನ್ನು ಸೆರೆಹಿಡಿಯಲು ಈ ಕಾರ್ಯಾಚರಣೆ ನಡೆಯುತ್ತಿದೆ ಎಂದರು.ಇದನ್ನೂ ಓದಿ: ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್
ಅ.1ರಂದು ನಡೆಯಲಿರುವ ಮೂರನೇ ಹಂತದ ಮತದಾನಕ್ಕೆ ಮೊದಲು ಭಯೋತ್ಪಾದಕರನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಭಯೋತ್ಪಾದಕ ಸಂಬಂಧಿತ ಘಟನೆಗಳು ಮತ್ತು ಹಿಂಸಾಚಾರ ಮುಕ್ತವಾಗಿ ಮೂರನೇ ಹಂತದ ಮತದಾನ ನಡೆಯಬೇಕು ಎಂದು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.
ಕಥುವಾ ಗುರಿಯಾಗಿದ್ದೇಕೆ?
1990ರ ದಶಕದಲ್ಲಿ ಕಥುವಾ (Kathua) ಭಯೋತ್ಪಾದಕರ ದೊಡ್ಡ ನೆಲೆಯಾಗಿ ಗುರುತಿಸಿಕೊಂಡಿತ್ತು. ಇಡೀ ಜಮ್ಮು ಮತ್ತು ಕಾಶ್ಮೀರದಾದ್ಯಂತ (Jammu and Kashmir) ದಾಳಿ ನಡೆಸಲು ಇಲ್ಲಿಯೇ ಉಗ್ರರು ಪ್ಲ್ಯಾನ್ ರೂಪಿಸುತ್ತಿದ್ದರು. ಸೇನೆ ವಿರುದ್ಧ ಯುದ್ಧಗಳ ತಯಾರಿಯೂ ಇಲ್ಲಿಯೇ ನಡೆಸುತ್ತಿದ್ದರು. ಕಥುವಾ ಉಧಂಪುರ, ಸಾಂಬಾ ಮತ್ತು ದೋಡಾ ಜಿಲ್ಲೆಗಳ ಪಕ್ಕದಲ್ಲಿದ್ದ ಕಾರಣ ಭದ್ರತಾ ಪಡೆಗಳು ಉಗ್ರರ ಹೆಡೆಮುರಿ ಕಟ್ಟಲು ಇಲ್ಲಿಯೇ ಬೀಡುಬಿಟ್ಟಿರುತ್ತಿದ್ದವು ಎಂದು ಅಲ್ಲಿನ ಪ್ರಾಥಮಿಕ ಮೂಲಗಳು ತಿಳಿಸಿವೆ.
ಈಗ ಮತ್ತೆ ಕಥುವಾ ಉಗ್ರರ ನೆಲೆಯಾಗುತ್ತಿದೆಯೇ ಎಂಬ ಸಂಶಯ ಹುಟ್ಟಿಕೊಂಡಿದೆ. ಏಕೆಂದರೆ ಇಲ್ಲಿನ ಭೌಗೋಳಿಕತೆ ವಿಶೇಷವಾಗಿದೆ. ಒಂದು ಬದಿಯಲ್ಲಿ ಪಾಕಿಸ್ತಾನ ಗಡಿ ಇದ್ದರೆ, ಮತ್ತೊಂದು ಬದಿಯಲ್ಲಿ ಹಿಮಾಚಲ ಪ್ರದೇಶ ಇದೆ. ಮುಖ್ಯವಾಗಿ ಅರಣ್ಯ ಪ್ರದೇಶ ದಟ್ಟವಾಗಿರುವುದರಿಂದ ಉಗ್ರರು ತಪ್ಪಿಸಿಕೊಳ್ಳಲು ಅನುಕೂಲಕರ ವಾತಾವರಣ ಇದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಉಗ್ರರು ಈ ಭಾಗದ ನೆಲೆಯನ್ನು ಗುರಿಯಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.