ಶ್ರೀನಗರ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ ಗುಲಾಂ ನಬಿ ಆಜಾದ್ ಅವರು ಹೊಸ ರಾಜಕೀಯ ಪ್ರಯಾಣವನ್ನು ಆರಂಭಿಸಿದ್ದಾರೆ. ಜಮ್ಮುವಿನಲ್ಲಿ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಹೊಸ ಪಕ್ಷದ ಹೆಸರು ಮತ್ತು ಧ್ವಜವನ್ನು ಜನರೇ ನಿರ್ಧರಿಸುತ್ತಾರೆ.
ಜಮ್ಮುವಿನ ಸೈನಿಕ್ ಮೈದಾನದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಆಜಾದ್, ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ನಾವಿದ್ದೇವೆ ಎಂದು ಭರವಸೆಯ ನುಡಿಗಳನ್ನಾಡಿದ್ದಾರೆ. ಇದನ್ನೂ ಓದಿ: 8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ
ನಾನು ನನ್ನ ಪಕ್ಷಕ್ಕೆ ಹೆಸರನ್ನು ನಿರ್ಧರಿಸಿಲ್ಲ. ಜಮ್ಮು ಮತ್ತು ಕಾಶ್ಮೀರದ ಜನರು ಪಕ್ಷದ ಹೆಸರು ಮತ್ತು ಧ್ವಜವನ್ನು ನಿರ್ಧರಿಸುತ್ತಾರೆ. ನಾನು ನನ್ನ ಪಕ್ಷಕ್ಕೆ ಹಿಂದೂಸ್ತಾನಿ ಹೆಸರನ್ನು ನೀಡುತ್ತೇನೆ. ಅದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಆಜಾದ್ ನೇತೃತ್ವದ ಪಕ್ಷವು ಬಿಜೆಪಿ ಅಥವಾ ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಅಥವಾ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಯ್ಕೆ ಹೊಂದಿದೆ. ಆದರೆ ಆಜಾದ್ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಅವರಿಗೂ (ಬಿಜೆಪಿ) ಮತ್ತು ನನಗೂ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಿನ್ನ ಗೆದ್ದ ಸೈಕಿಯಾ ಈಗ ಅಸ್ಸಾಂನಲ್ಲಿ ಡಿಎಸ್‌ಪಿ ಆಫೀಸರ್
ಗುಲಾಂ ನಬಿ ಆಜಾದ್ ಅವರು ಈಚೆಗೆ ಕಾಂಗ್ರೆಸ್‌ನ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು. ಅಲ್ಲದೇ ಹೊಸ ಪಕ್ಷ ಸ್ಥಾಪಿಸುವ ಕುರಿತು ಆಶಯ ವ್ಯಕ್ತಪಡಿಸಿದ್ದಾರೆ.