ಶ್ರೀನಗರ: ನವಜಾತ ಶಿಶು ಸಾವನ್ನಪ್ಪಿದೆ ಎಂದು ವೈದ್ಯರು ಅವರು ಘೋಷಿಸಿದ್ದರಿಂದ ಆ ಮಗುವನ್ನು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಲು ಸ್ಮಶಾನಕ್ಕೆ ಕರೆದೊಯ್ಯುತ್ತಿರುವಾಗ ಮಗು ಜೀವಂತವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಬಂಕೂಟ್ ನಿವಾಸಿ ಬಶರತ್ ಅಹ್ಮದ್ ಅವರ ಪತ್ನಿಯ ಹೆರಿಗೆ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿತ್ತು. ಇದಾದ ನಂತರ ಅಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿ ಮಗು ಸತ್ತಿದೆ ಎಂದು ಕುಟುಂಬಕ್ಕೆ ತಿಳಿಸಿದ್ದರು. ಇದಾದ ಬಳಿಕ ಕುಟುಂಬಸ್ಥರು ಮಗುವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ದಿದ್ದಾರೆ.
ಆದರೆ ಕುಟುಂಬದ ಸದಸ್ಯರು ಮಗು ಚಲಿಸುತ್ತಿರುವುದನ್ನು ಗಮನಿಸಿ ಇತರರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಗುವನ್ನು ಮತ್ತೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿಂದ ವಿಶೇಷ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ರವಾನಿಸಲಾಯಿತು. ಇದನ್ನೂ ಓದಿ: ಹುಬ್ಬಳ್ಳಿ ಅಪಘಾತ ಪ್ರಕರಣ- ಇನ್ನೂ ಐದಾರು ಜನರ ಸ್ಥಿತಿ ಚಿಂತಾಜನಕವಾಗಿದೆ: ಕಿಮ್ಸ್ ನಿರ್ದೇಶಕ
ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕೊಪಗೊಂಡ ಮಗುವಿನ ಕುಟುಂಬ ಸದಸ್ಯರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಇಬ್ಬರು ಆಸ್ಪತ್ರೆಯ ನೌಕರರನ್ನು ಅಮಾನತುಗೊಳಿಸಿದ್ದಾರೆ. ಎಸ್‍ಎಚ್‍ಒ ಬನಿಹಾಲ್ ಮುನೀರ್ ಖಾನ್ ನೇತೃತ್ವದ ಪೊಲೀಸ್ ತಂಡವು ಆಸ್ಪತ್ರೆಗೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸ್ಕೂಲ್ ಮೆಟ್ಟಿಲು, ಕಾಂಪೌಂಡ್, ರಸ್ತೆಯಲ್ಲೆಲ್ಲಾ Sorry- ವ್ಯಕ್ತಿಗಾಗಿ ಪೊಲೀಸರು ಹುಡುಕಾಟ