ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದಾಚಿಗಂ ಅರಣ್ಯ ಪ್ರದೇಶದಲ್ಲಿ (Dachigam Forest) ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಗ್ರರಿರುವ ಮಾಹಿತಿ ಮೇರೆಗೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಸೋಮವಾರ (ಡಿ.01) ಎನ್‌ಕೌಂಟರ್ ಪ್ರಾರಂಭವಾಗಿದ್ದು, ಮಂಗಳವಾರ ಬೆಳಿಗ್ಗೆ ಓರ್ವ ಉಗ್ರ ಹತನಾಗಿದ್ದಾನೆ.ಇದನ್ನೂ ಓದಿ: UI ರಿಲೀಸ್‌ಗೂ ಮುನ್ನ ಉಪೇಂದ್ರ & ಟೀಮ್ ಟೆಂಪಲ್ ರನ್
ದಾಚಿಗಂ ಅರಣ್ಯ ಪ್ರದೇಶಕ್ಕೂ ಮುನ್ನ ಶ್ರೀನಗರದ ಹರ್ವಾನ್ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಬಳಿಕ ಉಗ್ರರ ಅಡಗುತಾಣ ಸುತ್ತುವರಿದಾಗ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್‌ಕೌಂಟರ್ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ನ.23 ರಂದು, ಬಾರಾಮುಲ್ಲಾ ಪೊಲೀಸರು ಹಾಗೂ ಭದ್ರತಾ ಪಡೆಗಳೊಂದಿಗೆ ನಡೆಸಿದ್ದ ಜಂಟಿ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕುಂಜರ್ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸುವ ಮೂಲಕ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಂಡರು.ಇದನ್ನೂ ಓದಿ: ಬಿಜೆಪಿಯಲ್ಲಿ ಬಣ ಫೈಟ್ – ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೇಟಿ