ಶ್ರೀನಗರ: ಮಹಿಳೆಯೊಬ್ಬಳು ಪುಟ್ಟ ಮಗುವಿಗೆ ಅಮಾನುಷವಾಗಿ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ವೀಡಿಯೋದಲ್ಲಿ ಮಹಿಳೆ ತನ್ನ ಮಡಿಲ ಮೇಲೆ ಅಳುತ್ತಿರುವ ಮಗುವನ್ನು ಮಲಗಿಸಿಕೊಂಡು ಹಾಸಿಗೆಯ ಮೇಲೆ ಕುಳಿತು ಯಾರೊಂದಿಗಾದರೂ ಜಗಳವಾಡುತ್ತಿರುವುದನ್ನು ಕಾಣಬಹುದಾಗಿದೆ. ಈ ವೇಳೆ ಮಗು ಅಳುತ್ತಲೇ ಇದ್ದಾಗ, ತಿಂಗಳುಗಳಷ್ಟೇ ತುಂಬಿರುವ ಮಗುವನ್ನು ಹಾಸಿಗೆಯ ಮೇಲೆ ಬಡಿಯುತ್ತಾ, ಗುದ್ದುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ
Advertisement
Advertisement
ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ವಿಚಾರವಾಗಿ ತನಿಖೆ ಆರಂಭಿಸಿದ್ದಾರೆ. ತನಿಖೆ ವೇಳೆ ಶಿಶುವಿಗೆ ಥಳಿಸಿದ ಮಹಿಳೆ ಮಗುವಿನ ತಾಯಿ ಎಂದು ತಿಳಿದು ಬಂದಿದ್ದು, ಈಕೆ ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ನಿವಾಸಿಯಾಗಿದ್ದಾಳೆ. ಇದೀಗ ಮಗು ಸುರಕ್ಷಿತವಾಗಿದ್ದು, ಆರೋಪಿಯನ್ನು ಬಂಧಿಸಿ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಣ್ಣಾವ್ರ 16ನೇ ಪುಣ್ಯಸ್ಮರಣೆ: ಡಾ.ರಾಜ್ ಸ್ಮಾರಕಕ್ಕೆ ಹರಿದು ಬಂತು ಜನಸಾಗರ