ರಾಮನವಮಿಯ ಧ್ವಜದಲ್ಲಿ ಮಾಂಸದ ತುಂಡು – ಜಮ್ಶೆಡ್‌ಪುರದಲ್ಲಿ ಹಿಂಸಾಚಾರ

Public TV
1 Min Read
Jharkhand Jamshedpur 1

– ಸೆಕ್ಷನ್ 144 ಜಾರಿ, ಇಂಟರ್‌ನೆಟ್ ಸ್ಥಗಿತ

ರಾಂಚಿ: ಜಾರ್ಖಂಡ್‌ನ (Jharkhand) ಜಮ್ಶೆಡ್‌ಪುರದಲ್ಲಿ (Jamshedpur) ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ಉಂಟಾಗಿದೆ. ಕಲ್ಲುತೂರಾಟ ಹಾಗೂ ವಾಹನ, ಅಂಗಡಿಗಳಿಗೆ ಬೆಂಕಿ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಸ್ತ್ರೀನಗರದಲ್ಲಿ (Shastrinagar) ಹಿಂಸಾಚಾರ (Violence) ನಡೆದಿದ್ದು, ಪರಿಸ್ಥಿತಿಯನ್ನು ತಣ್ಣಗಾಗಿಸಲು ಪ್ರದೇಶದಲ್ಲಿ ಸೆಕ್ಷನ್ 144 ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾತ್ರವಲ್ಲದೇ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಧಾರ್ಮಿಕ ಕಾರ್ಯಕ್ರಮದ ವೇಳೆ ಧರೆಗುರುಳಿದ ಮರ 7 ಸಾವು, ಐವರಿಗೆ ಗಾಯ

Jharkhand Jamshedpur

ಮೂಲಗಳ ಪ್ರಕಾರ ರಾಮನವಮಿಯ ಧ್ವಜದಲ್ಲಿ ಮಾಂಸದ ತುಂಡನ್ನು ಕಟ್ಟಿದ್ದನ್ನು ಸ್ಥಳೀಯ ಸಂಘಟನೆಯ ಸದಸ್ಯರು ನೋಡಿದ್ದಾರೆ. ಬಳಿಕ ಶನಿವಾರ ರಾತ್ರಿ ವೇಳೆ ಈ ವಿಚಾರವಾಗಿ 2 ಗುಂಪುಗಳ ನಡುವೆ ಉದ್ವಿಗ್ನತೆ ಉಂಟಾಗಿದೆ. ಬಳಿಕ ಪರಸ್ಪರ ಇಟ್ಟಿಗೆಗಳಿಂದ ದಾಳಿ ನಡೆಸಿದ್ದು, ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದೆ ಎನ್ನಲಾಗಿದೆ.

ಹಿಂಸಾಚಾರ ಮುಂದುವರಿದು ಭಾನುವಾರ ಶಾಸ್ತ್ರೀನಗರದಲ್ಲಿ 2 ಅಂಗಡಿಗಳಿಗೆ ಮತ್ತು ಆಟೋ ರಿಕ್ಷಾಗೆ ಬೆಂಕಿ ಹಚ್ಚಲಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯುವನ್ನು ಪ್ರಯೋಗಿಸಿದ್ದಾರೆ. ಬಳಿಕ ನಗರದಲ್ಲಿ ಸೆಕ್ಷನ್ 144ನ್ನು ವಿಧಿಸಲಾಗಿದ್ದು, ಸದ್ಯ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಶಾಸ್ತ್ರಿನಗರದಲ್ಲಿ ಸಾಕಷ್ಟು ಪೊಲೀಸ್ ಪಡೆ ನಿಯೋಜಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಗೆ ತನ್ನ ನಾಲಿಗೆ ನೆಕ್ಕುವಂತೆ ಸೂಚಿಸಿದ ದಲೈ ಲಾಮಾ – ಭಾರೀ ಟೀಕೆ

Share This Article